ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaluru): ಸದನದಲ್ಲಿ ಆರ್ ಎಸ್ಎಸ್ ಗೀತೆ ಹಾಡಿರುವುದಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಕಾಂಗ್ರೆಸ್ ನಾಯಕರು ಕಿಡಿ ಕಾರಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದು, ನಾನು ಯಾರಿಗಿಂತಲೂ ದೊಡ್ಡವನಲ್ಲ. ನನ್ನಿಂದ ತಪ್ಪಾಗಿದ್ದರೆ ಕ್ಷಮೆ ಕೇಳಲು ಸಿದ್ಧ ಎಂದಿದ್ದಾರೆ. ಎಲ್ಲ ಕಾಂಗ್ರೆಸ್ ಕಾರ್ಯಕರ್ತರಿಗೆ, ನಾಯಕರಿಗೆ ಕ್ಷಮೆ ಕೇಳುತ್ತೇನೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ದೇಶದ ಐಕ್ಯತೆಗೆ, ಸಮಗ್ರತೆಗೆ, ಶಾಂತಿಗೆ ಒಂದು ಇತಿಹಾಸದ ಪಕ್ಷದಲ್ಲಿ ನಾನು ಕೆಲಸ ಮಾಡುತ್ತಿದ್ದೇನೆ. ಗಾಂಧಿ ಕುಟುಂಬ, ಮಲ್ಲಿಕಾರ್ಜುನ್ ಖರ್ಗೆ ಅವರ ನಾಯಕತ್ವದಲ್ಲಿ ರಾಜಕಾರಣ ಮಾಡಿಕೊಂಡು ಬರುತ್ತಿದ್ದೇನೆ. ಯಾರಿಗೋ ಹೆದರಿಸಿಕೊಂಡು ಬೆಳೆದಿಲ್ಲ ಎನ್ನುವ ಮೂಲಕ ಸದನದಲ್ಲಿ ಹಾಡಿದ ಆರ್ ಎಸ್ಎಸ್ ಗೀತೆ ಸಂಬಂಧ ಮಾತನಾಡಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಎಂಎಲ್ಸಿ ಬಿ.ಕೆ ಹರಿಪ್ರಸಾದ್ ಸೇರಿದಂತೆ ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಕ್ಷಮೆ ಕೇಳಬೇಕು ಎಂದು ಬಿ.ಕೆ ಹರಿಪ್ರಸಾದ್ ಒತ್ತಾಯಿಸಿದ್ದರು.