Ad imageAd image

ನಾನೇ ವಾದ ಮಾಡಿ ಶಿಕ್ಷೆ ಕೊಡಿಸುತ್ತೇನೆ: ಸ್ನೇಹಮಹಿ ಕೃಷ್ಣ

Nagesh Talawar
ನಾನೇ ವಾದ ಮಾಡಿ ಶಿಕ್ಷೆ ಕೊಡಿಸುತ್ತೇನೆ: ಸ್ನೇಹಮಹಿ ಕೃಷ್ಣ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಮೈಸೂರು(Mysore): ಮುಡಾ ಪ್ರಕರಣವನ್ನು ಸಿಬಿಐಗೆ(CBI) ವಹಿಸುವಂತೆ ಕೋರಿ ಸಾಮಾಜಿಕ ಹೋರಾಟಗಾರ ಸ್ನೇಹಮಹಿ ಕೃಷ್ಣ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಲಾಗಿದೆ. ಈ ಸಂಬಂಧ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಮುಡಾ ಪ್ರಕರಣವನ್ನು ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸುವ ಬಗ್ಗೆ ನನಗೆ ತಾವೆಲ್ಲರೂ ಪ್ರಶ್ನೆ ಮಾಡುತ್ತಿದ್ದಿದ್ದು ಸರಿಯಷ್ಟೆ. ಮಾನ್ಯ ಉಚ್ಛ ನ್ಯಾಯಾಲಯವು ನನ್ನ ಅರ್ಜಿಗೆ ಸಂಬಂಧಿಸಿದಂತೆ ನೀಡಿರುವ ತೀರ್ಪಿನ ಅಂಶಗಳನ್ನು ಓದಿದ ನಂತರ ಎರಡು ದಿನಗಳ ಕಾಲ ಚಿಂತನೆ ನಡೆಸಿ, ಆತ್ಮೀಯ ವಕೀಲರೊಂದಿಗೆ, ಹಿತೈಷಿಗೊಳದಿಂಗೆ ಚರ್ಚೆ ನಡೆಸಿ ನನ್ನ ಇದುವರೆಗಿನ ಕಾನೂನು(Law) ಹೋರಾಟದ ಅನುಭವ ಆಧರಿಸಿ ಒಂದು ನಿರ್ಧಾರಕ್ಕೆ ಬಂದಿರುತ್ತೇನೆ.

ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಲು ಮಾನ್ಯ ಸರ್ವೋಚ್ಚ(Supreme Court) ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಮತ್ತಷ್ಟು ಕಾಲ ವಿಳಂಬ ಮಾಡುವ ಬದಲು, ಲೋಕಾಯುಕ್ತ ಅಧಿಕಾರಿಗಳು ಏನೇ ವರದಿ ಸಲ್ಲಿಸಿದರೂ ಸಹ, ನನ್ನ ಬಳಿ ಇರುವ ಮತ್ತು ಲಭ್ಯವಾಗುವ ಸಾಕ್ಷಾಧಾರಗಳನ್ನು ಆಧರಿಸಿ ಮಾನ್ಯ ನ್ಯಾಯಾಲಯದಲ್ಲಿ ಮಾಡಿರುವ ಆರೋಪವನ್ನು ಸಾಬೀತು ಪಡಿಸಿ ಆರೋಪಿತರಿಗೆ ಶಿಕ್ಷೆ ಕೊಡಿಸಬಹುದು ಎಂಬ ವಿಶ್ವಾಸ ಮೂಡಿದ್ದರಿಂದ ವಕೀಲರ ಪರೋಕ್ಷ ಸಹಕಾರ ಪಡೆದುಕೊಂಡು ಅವಶಕ್ಯತೆ ಬಿದ್ದರೆ ವಕೀಲರನ್ನು ನೇಮಕ ಮಾಡಿಕೊಳ್ಳುವ ಹಕ್ಕನ್ನು ಉಳಿಸಿಕೊಂಡು ಖುದ್ದಾಗಿ ನಾನೇ ನ್ಯಾಯಾಲಯಕ್ಕೆ ಸಾಕ್ಷಾಧಾರಗಳನ್ನು ಒದಗಿಸಿ ವಾದ ಮಂಡನೆ ಮಾಡಿ ನಾನು ಮಾಡಿರುವ ಆರೋಪವನ್ನು ಸಾಬೀತು ಪಡಿಸಿ ಆದಷ್ಟು ಬೇಗ ಆರೋಪಿಗಳಿಗೆ ಶಿಕ್ಷೆ ಕೊಡಿಸಲು ನಿರ್ಧರಿಸಿದ್ದೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.

WhatsApp Group Join Now
Telegram Group Join Now
Share This Article