ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಪರಿಷತ್ ಸದಸ್ಯ ಯತೀಂದ್ರ ಹಸ್ತಕ್ಷೇಪ ಹೆಚ್ಚಾಗಿದ್ದರಿಂದ ಬೇಸತ್ತು ಸಚಿವ ಸ್ಥಾನಕ್ಕೆ ಕೆ.ಜೆ ಜಾರ್ಜ್ ರಾಜೀನಾಮೆ ನೀಡಿದ್ದಾರೆ ಎಂದು ಬಿಜೆಪಿ ಶಾಸಕ ಸುನಿಲ್ ಕುಮಾರ್ ಹೇಳಿದ್ದಾರೆ ಅನ್ನೋದು ಹರಿದಾಡುತ್ತಿದೆ. ಈ ಬಗ್ಗೆ ಮಾಧ್ಯಮಗಳಲ್ಲಿಯೂ ಬರುತ್ತಿದೆ ಅನ್ನೋ ವಿಚಾರಕ್ಕೆ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ ಕೊಟ್ಟಿದ್ದಾರೆ.
ನಾನು ರಾಜೀನಾಮೆ ಕೊಟ್ಟಿಲ್ಲ. ಮುಖ್ಯಮಂತ್ರಿಗಳ ಮೇಲೆ ಸಂಪೂರ್ಣ ವಿಶ್ವಾಸವಿದೆ. ವಾಸ್ತವ ಸಂಗತಿ ಬಗ್ಗೆ ವಿ.ಸುನಿಲ್ ಕುಮಾರ್ ಸದನದಲ್ಲಿ ಹೇಳಲಿ ಎಂದು ಸಚಿವರು ಆಗ್ರಹಿಸಿದ್ದಾರೆ.




