ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಇದೀಗ ರಾಜ್ಯದಲ್ಲಿ ಸಿಎಂ ಸ್ಥಾನದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನಾನು ಸಹ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2028ರಲ್ಲಿ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ. ಆದರೆ, ಈಗ ನಾನು ಅಭ್ಯರ್ಥಿ ಅಲ್ಲ. ಯಾರ ಮೇಲೂ ಒತ್ತಡ ಹಾಕುತ್ತಿಲ್ಲ ಎಂದಿದ್ದಾರೆ.
ಅಧಿಕಾರ ಯಾರಿಗೂ ಶಾಶ್ವತ ಅಲ್ಲ. ಕಾಲಚಕ್ರ ತಿರುಗುತ್ತಲೇ ಇರುತ್ತದೆ. ರಾಮನಗರ ಜಿಲ್ಲೆಯ ಬೆಂಗಳುರು ದಕ್ಷಿಣ ಮಾಡಿರುವುದರ ಹಿಂದೆ ಉಪ ಮುಖ್ಯಮಂತ್ರಿಗಳು ಏನೋ ಒಂದು ಉದ್ದೇಶ ಹೊಂದಿದ್ದಾರೆ. ಬೆಳಗಾವಿ ಜಿಲ್ಲೆ ವಿಭಜನೆ ಬಗ್ಗೆ ಮುಖ್ಯಮಂತ್ರಿ ಹತ್ತಿರ ಕೇಳಿದ್ದೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.