ಪ್ರಜಾಸ್ತ್ರ ಸುದ್ದಿ
ಮೈಸೂರು(Mysore): ಮುಡಾ ಹಗರಣದ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ(Yaduveer Krishnadatta Chamaraja Wadiyar) ಒಡೆಯರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ತನಿಖೆ ಎದುರಿಸಬೇಕು. ರಾಜ್ಯಪಾಲರು ತನಿಖೆಗೆ ಸೂಚಿಸಿದ್ದಾರೆ ಎಂದರು.
ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ 5 ಸಾವಿರ ಕೋಟಿ ರೂಪಾಯಿಯ ಹಗರಣ ನಡೆದಿದೆ. ಮುಖ್ಯಮಂತ್ರಿಗಳ ಕುಟುಂಬಸ್ಥರು ನಿವೇಶನದ ಫಲಾನುಭವಿಗಳಿದ್ದಾರೆ. ಹೀಗಾಗಿ ಸ್ವತಂತ್ರವಾಗಿ ತನಿಖೆ ನಡೆಸಬೇಕು ಎಂದು ಬಿಜೆಪಿ ಮೊದಲಿನಿಂದಲೂ ಆಗ್ರಹಿಸುತ್ತಿದೆ. ಸತತ ಮೂರು ಬಾರಿ ಇಡಿ ಅಧಿಕಾರಿಗಳು ಮುಡಾಕ್ಕೆ ದಾಖಲೆ ಕೇಳಿದೆ. ಆದರೆ, ನೀಡಿಲ್ಲ. ಹೀಗಾಗಿ ದಾಳಿ ನಡೆಸಲಾಗಿದೆ. ಸಿದ್ದರಾಮಯ್ಯನವರು ರಾಜೀನಾಮೆ ನೀಡದ್ದರೆ ಬಿಜೆಪಿ ಕಾನೂನು ಹೋರಾಟ ನಡೆಸಲಿದೆ ಅಂತಾ ಹೇಳಿದರು.