Ad imageAd image

ಬಸ್ ನಿಲ್ಲಿಸದೆ ಹೋದರೆ ಬೃಹತ್ ಪ್ರತಿಭಟನೆ: ಪೀರು ಕೆರೂರು

Nagesh Talawar
ಬಸ್ ನಿಲ್ಲಿಸದೆ ಹೋದರೆ ಬೃಹತ್ ಪ್ರತಿಭಟನೆ: ಪೀರು ಕೆರೂರು
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಸಿಂದಗಿ(Sindagi): ತಾಲೂಕಿನ ಯರಗಲ್.ಕೆ.ಡಿ ಗ್ರಾಮಕ್ಕೆ ಕಲಬುರಗಿ ಘಟಕದ ಬಸ್ ಗಳು ನಿಲ್ಲಿಸದೆ ಹೋಗುತ್ತಿದ್ದು, ಇದನ್ನು ಖಂಡಿಸಿ ಗುರುವಾರ ಪ್ರತಿಭಟನೆ ನಡೆಸಲಾಯಿತು. ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ಪೀರು ಕೆರೂರು ನೇತೃತ್ವದಲ್ಲಿ ವಿದ್ಯಾರ್ಥಿಗಳು, ಗ್ರಾಮಸ್ಥರು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು. ರಸ್ತೆ ಮಧ್ಯೆ ಟಯರ್ ಗೆ ಬೆಂಕಿ ಹಚ್ಚಿ ಧಿಕ್ಕಾರ ಕೂಗಿದರು. ಕಲಬರಗಿ ಘಟಕದ ಬಸ್ ಗಳು ಯರಗಲ್ ಕೆ.ಡಿ ಗ್ರಾಮದಲ್ಲಿ ನಿಲ್ಲಿಸಬೇಕು. ಈ ಸಂಬಂಧ ಕ್ರಮ ತೆಗೆದುಕೊಳ್ಳಬೇಕು. ಒಂದು ವಾರದೊಳಗೆ ಕ್ರಮ ತೆಗೆದುಕೊಳ್ಳದೆ ಹೋದರೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಪೀರು ಕೆರೂರು ಎಚ್ಚರಿಕೆ ನೀಡಿದರು.

ಯರಗಲ್ ಕೆ.ಡಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೆ. ಪಿಯುಸಿ ಕಾಲೇಜು, ಖಾಸಗಿ ಶಾಲೆಗಳಿವೆ. 2 ಸಾವಿರ ಜನಸಂಖ್ಯೆ ಇದೆ. ಸುತ್ತಲಿನ ಗ್ರಾಮಗಳಿಂದ ವಿದ್ಯಾರ್ಥಿಗಳು ಇಲ್ಲಿಗೆ ವಿದ್ಯಾಭ್ಯಾಸಕ್ಕೆ ಬರುತ್ತಾರೆ. ಇಲ್ಲಿನ ಜನರು ಕೂಲಿಗಾಗಿ ಸಿಂದಗಿ, ಜೇವರ್ಗಿ ಸೇರಿ ಸುತ್ತಮುತ್ತ ಗ್ರಾಮಗಳಿಗೆ ಹೋಗುತ್ತಾರೆ. ವಿಜಯಪುರ ಘಟಕದ ಬಸ್ ಗಳು ಇಲ್ಲಿ ನಿಲ್ಲಿಸುತ್ತವೆ. ಆದರೆ, ಕಲಬುರಗಿ ಘಟಕದ ಬಸ್ ಗಳು ನಿಲ್ಲಿಸುವುದಿಲ್ಲ. ಇದರಿಂದ ಸಾಕಷ್ಟು ತೊಂದರೆಯಾಗುತ್ತದೆ. ಇನ್ನು ಮುಂದೆ ಕಲಬುರಗಿ ಘಟಕದ ಬಸ್ ಗಳು ಸಹ ನಿಲ್ಲಿಸಬೇಕು ಎಂದು ಆಗ್ರಹಿಸಲಾಯಿತು. ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಹಾಗೂ ವಿಜಯಪುರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಸಿಪಿಐ ನಾನಾಗೌಡ ಪೊಲೀಸಪಾಟೀಲ, ಪಿಎಸ್ಐ ಆರೀಫ್ ಮುಶಾಪುರಿ ಹಾಜರಿದ್ದರು. ವಿದ್ಯಾರ್ಥಿಗಳು, ಗ್ರಾಮಸ್ಥರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

WhatsApp Group Join Now
Telegram Group Join Now
Share This Article