Ad imageAd image

‘ರಿಯಲ್ ಎಸ್ಟೇಟ್ ಮಾಫಿಯಾ ಜೊತೆ ಪೊಲೀಸರು ಕೈಜೋಡಿಸಿದರೆ ಸಹಿಸಿಲ್ಲ’

Nagesh Talawar
‘ರಿಯಲ್ ಎಸ್ಟೇಟ್ ಮಾಫಿಯಾ ಜೊತೆ ಪೊಲೀಸರು ಕೈಜೋಡಿಸಿದರೆ ಸಹಿಸಿಲ್ಲ’
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಚಾಮರಾಜಪೇಟೆ, ಕಬ್ಬನ್ ಪಾರ್ಕ್ ಹಾಗೂ ಹೈಗ್ರೌಂಡ್ಸ್ ನ ನೂತನ ಪೊಲೀಸ್ ಠಾಣೆಗಳನ್ನು ಹಾಗೂ ಪುಲಕೇಶಿನಗರದಲ್ಲಿ ನೂತನವಾಗಿ ನಿರ್ಮಿಸಿರುವ ಪೊಲೀಸ್ ವಸತಿ ಗೃಹಗಳ ಕಟ್ಟಡವನ್ನು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ರಾಜ್ಯದ ಜನಸಂಖ್ಯೆ 7 ಕೋಟಿ ದಾಟುತ್ತಿದೆ. ಇವರೆಲ್ಲರ ರಕ್ಷಣೆ, ಮಾನ, ಪ್ರಾಣ, ಆಸ್ತಿ ರಕ್ಷಿಸಿ ಅವರ ನೆಮ್ಮದಿಯ ಬದುಕಿಗೆ ಸುರಕ್ಷಿತ ವಾತಾವರಣ ನಿರ್ಮಿಸುವ ಜವಾಬ್ದಾರಿ ಪೊಲೀಸರ ಮೇಲಿದೆ ಎಂದರು.

ಜನರಿಗೆ ಉದ್ಯೋಗ ಇಲ್ಲದಿರುವುದು, ಅವಕಾಶ ಇಲ್ಲದಿದ್ದಾಗ ಅಪರಾಧ ಜಗತ್ತಿನ ಕಡೆ ಆಕರ್ಷರಾಗುತ್ತಾರೆ. ನಗರದಲ್ಲಿ ರಿಯಲ್ ಎಸ್ಟೇಟ್ ದಂಧೆಯಿಂದ ಅಪರಾಧಗಳು ಹೆಚ್ಚುತ್ತಿವೆ. ಪೊಲೀಸರು ರಿಯಲ್ ಎಸ್ಟೇಟ್ ಮಾಫಿಯಾ ಜೊತೆಗೆ ಕೈ ಜೋಡಿಸಿದರೆ ಸಹಿಸಲ್ಲ. ಯಾವುದೇ ಕಾರಣಕ್ಕೂ ಅಕ್ರಮ ರಿಯಲ್ ಎಸ್ಟೇಟ್ ಗೆ ಬೆಂಬಲ ನೀಡಬಾರದು. ಇನ್ನು ರಾಜ್ಯದಲ್ಲಿ ಅಪರಾಧಿ ಕೃತ್ಯಗಳು ಕಡಿಮೆಯಾಗುತ್ತಿರುವುದು ನೆಮ್ಮದಿಯ ಸಂಗತಿ. ಆದರೆ, ಪೊಲೀಸರು ಚಾಪೆ ಕಳೆಗೆ ತೂರಿದರೆ ಅಪರಾಧಿಗಳು ರಂಗೋಲಿ ಕೆಳಗೆ ತೂರಿ ಕಾನೂನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಾರೆ. ಇದಕ್ಕೆ ಅವಕಾಶ ಕೊಡಬಾರದು ಎಂದು ಹೇಳಿದರು.

WhatsApp Group Join Now
Telegram Group Join Now
Share This Article