ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದಕ್ಕೆ ಪಡೆದಿದೆ. ಇದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್ ಗೆ ಹೋಗಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಸಹ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಅದನ್ನು ಮಾನ್ಯ ಮಾಡಲಾಗಿದೆ.
ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ ಬಿಜೆಪಿ ಸರ್ಕಾರದಲ್ಲಿ ಡಿ.ಕೆ ಶಿವಕುಮಾರ್ ಜೈಲು ಪಾಲಾಗಿದ್ದರು. ನಂತರ ಜಾಮೀನು ಪಡೆದು ಹೊರ ಬಂದಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸಿಬಿಐ ತನಿಕೆಯನ್ನು ಹಿಂದಕ್ಕೆ ಪಡೆಯಿತು. ಇದಕ್ಕೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಸರ್ಕಾರಕ್ಕೆ ಹೇಳಿದ್ದು, ಡಿಸಿಎಂ ಡಿ.ಕೆ ಶಿವಕುಮಾರಗೆ ಟೆನ್ಷನ್ ಶುರುವಾಗಿದೆ.