ಪ್ರಜಾಸ್ತ್ರ ಸುದ್ದಿ
ಬೆಳಗಾವಿ(Belagavi): ಕಿತ್ತೂರು ಬಳಿ ಮಂಗಳವಾರ ಮುಂಜಾನೆ ಸಂಭವಿಸಿದ ಕಾರು ಅಪಘಾತದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಸಹೋದರ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ, ಗನ್ ಮ್ಯಾನ್ ಹಾಗೂ ಕಾರು ಚಾಲಕ ಗಾಯಗೊಂಡಿದ್ದಾರೆ. ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬೆನ್ನುಮೂಳೆಯಲ್ಲಿ ಸೀಳು ಕಂಡು ಬಂದಿದೆ.
ಸಿಎಲ್ ಪಿ ಸಭೆಯ ಬಳಿಕ ಊರಿನತ್ತ ಕಾರಿನಲ್ಲಿ ತೆರಳುತ್ತಿದ್ದರು. ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ಬಳಿ ನಾಯಿ ದಿಢೀರ್ ಅಡ್ಡ ಬಂದಾಗ ಅದನ್ನು ತಪ್ಪಿಸಲು ಹೋದಾಗ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರಿನ ಏರ್ ಬ್ಯಾಗ್ ತೆರೆದುಕೊಂಡಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.