ಪ್ರಜಾಸ್ತ್ರ ಸುದ್ದಿ
ಕಲಬುರಗಿ(Kalaburagi): ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿದಂತೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಸಮೀಕ್ಷೆ ಹೆಸರಲ್ಲಿ ಹಿಂದೂ ಸಮಾಜ ಒಡೆಯುವುದಕ್ಕೆ ರಾಜ್ಯ ಸರ್ಕಾರ ಕೈಹಾಕಿದೆ. ಸಮೀಕ್ಷೆಗೆ ನಮ್ಮ ವಿರೋಧವಿಲ್ಲ. ಆದರೆ, ರಾಜ್ಯ ಸರ್ಕಾರದ ಇಚ್ಛಾಶಕ್ತಿಯ ಬಗ್ಗೆ ಗೊಂದಲವಿದೆ ಎಂದರು.
ನಗರದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಜನಗಣತಿಯ ಜೊತೆಗೆ ಜಾತಿಗಣತಿಗೂ ಮುಂದಾಗಿದೆ. ಇದೊಂದು ಐತಿಹಾಸಿಕ ನಿರ್ಧಾರ. ಆದರೆ, ಸಿಎಂ ಸಿದ್ದರಾಮಯ್ಯನವರು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಸಮೀಕ್ಷೆ ನಡೆಸುತ್ತಿದ್ದಾರೋ ಅಥವ ಪ್ರಾಮಾಣಿಕವಾಗಿ ಹಿಂದುಳಿದ ಸಮಾಜದವರಿಗೆ ನ್ಯಾಯ ಒದಗಿಸಲು ಮಾಡುತ್ತಿದ್ದಾರೋ ಗೊತ್ತಿಲ್ಲ ಎಂದರು.