ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ರಾಜ್ಯದಲ್ಲಿ ಆರ್ಥಿಕ ಸಂಕಷ್ಟವಿದೆ. ಬೆಲೆ ಏರಿಕೆಯಿಂದ ಜನರು ಕಂಗಾಲಾಗಿದ್ದಾರೆ. ಇದರಿಂದಾಗಿ ರಾಜ್ಯ ದಿವಾಳಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದರು. ಬುಧವಾರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಲೆ ಏರಿಕೆ ಮಾಡುವ ಜನರ ಮೇಲೆ ಬರೆ ಎಳೆಯುವ ಕೆಲಸವನ್ನು ಮಾಡಲಾಗುತ್ತಿದೆ. ಆರ್ಥಿಕ ಪರಿಸ್ಥಿತಿ ಬಗ್ಗೆ ಕಾಂಗ್ರೆಸ್ ಸರ್ಕಾರಿ ಶ್ವೇತಪತ್ರ ಹೊರಡಿಸಲಿ ಎಂದು ಆಗ್ರಹಿಸಿದರು.
ಆಸ್ಪತ್ರೆ ಸೇವಾ ಶುಲ್ಕ, ವಾಹನ ನೋಂದಣಿ, ಆಸ್ತಿ ನೋಂದಣಿ, ನೀರಿನ ತೆರಿಗೆ, ಆಸ್ತಿ ತೆರಿಗೆ, ಬಸ್ ದರ, ಹಾಲಿನ ಬೆಲೆ, ವಿದ್ಯುತ್ ದರ, ಜನನ ಮತ್ತು ಮರಣ ಪ್ರಮಾಣ ಪತ್ರದ ಶುಲ್ಕ, ರಸಗೊಬ್ಬರಗಳ ಬೆಲೆ ಹೀಗೆ ಎಲ್ಲದರ ಬೆಲೆ ಏರಿಕೆ ಮಾಡಲಾಗಿದೆ. ಇದರಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ. ಸಾರಿಗೆ ಇಲಾಖೆ ಮುಚ್ಚುವ ಸ್ಥಿತಿಯಲ್ಲಿದೆ ಎಂದು ವಾಗ್ದಾಳಿ ನಡೆಸಿದರು.