ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaluru): ಸಿಲಿಕಾನ್ ಸಿಟಿಯಲ್ಲಿ ಶನಿವಾರ ಮುಂಜಾನೆ ನಗರತ್ ಪೇಟೆಯಲ್ಲಿರುವ ನಾಲ್ಕು ಅಂತಸ್ತಿನ ಮಹಡಿಯಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಇದರಲ್ಲಿ ಸಿಲುಕಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಇಬ್ಬರು ಮಕ್ಕಳು ಸೇರಿ ಐವರು ಸಾವನ್ನಪ್ಪಿದ್ದಾರೆ. ಈ ಮೊದಲು ಗ್ಯಾಸ್ ಸೋರಿಕೆಯಿಂದ ಬೆಂಕಿ ಅನಾಹುತ ನಡೆದಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗುತ್ತಿದೆ.
ಫ್ಲೋರ್ ಮ್ಯಾಟ್ ತಯಾರಿಸುವ ಘಟಕ ಕಾರ್ಯನಿರ್ವಹಿಸುತ್ತಿತ್ತು. ಬೆಂಕಿ ಅನಾಹುತದಲ್ಲಿ ಮದನ್ ಕುಮಾರ್(36), ಇವರ ಪತ್ನಿ ಸಂಗೀತಾ(33), ಇವರ ಮಕ್ಕಳಾದ ವಿಹಾನ್(05) ಮಿಥೇಶ್(08) ಹಾಗೂ ಎರಡನೇ ಮಹಡಿಯಲ್ಲಿದ್ದ ಕಾರ್ಮಿಕ ಸುರೇಶ್(30) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ನಸುಕಿನಜಾವ 3.30ರ ಸುಮಾರಿಗೆ ಈ ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ.