Ad imageAd image

ಇಂಡಿ: ಅನ್ನಭಾಗ್ಯ ಅಕ್ಕಿ ಸಾಗಾಟ ಯತ್ನ

Nagesh Talawar
ಇಂಡಿ: ಅನ್ನಭಾಗ್ಯ ಅಕ್ಕಿ ಸಾಗಾಟ ಯತ್ನ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಇಂಡಿ(Indi): ಅನಧಿಕೃತವಾಗಿ ಪಡಿತರ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಸಾಗಾಟ ಮಾಡುವಾಗ ಪೊಲೀಸರು ಹಾಗೂ ಆಹಾರ ನಿರೀಕ್ಷಕ ಅಧಿಕಾರಿಗಳು ದಾಳಿ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ನಡೆದಿದೆ. 17,080 ರೂಪಾಯಿ ಮೌಲ್ಯದ 610 ಕೆಜಿ ಅಕ್ಕಿಯನ್ನು ಜಪ್ತಿ ಮಾಡಲಾಗಿದೆ.

ಪ್ಯಾಸೆಂಜರ್ ಆಟೋದಲ್ಲಿ ಅನಧಿಕೃತವಾಗಿ ಅಕ್ಕಿ ತುಂಬಿಕೊಂಡು ನಿಂತಾಗ ಅಧಿಕಾರಿಗಳು ದಾಳಿ ಮಾಡಿದ್ದಾರೆ.  ಮೂರು ಲಕ್ಷದ ಆಟೋ ಹಾಗೂ 17,080 ಮೌಲ್ಯದ ಅಕ್ಕಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು ಪರಾರಿಯಾಗಿದ್ದಾರೆ. ಈ ಕುರಿತು ಇಂಡಿ ಶಹರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Group Join Now
Telegram Group Join Now
Share This Article