Ad imageAd image

ಅಮಿತ್ ಶಾ ವಿರುದ್ಧ ಇಂಡಿಯಾ ಬಣ ಪ್ರತಿಭಟನೆ

Nagesh Talawar
ಅಮಿತ್ ಶಾ ವಿರುದ್ಧ ಇಂಡಿಯಾ ಬಣ ಪ್ರತಿಭಟನೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ನವದೆಹಲಿ(New Delhi): ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಅಂಬೇಡ್ಕರ್ ಅವರ ಬಗ್ಗೆ ಆಡಿದ ಮಾತುಗಳಿಗೆ ದೇಶ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಇಂಡಿಯಾ ಬಣದಿಂದ ಗುರುವಾರ ಪ್ರತಿಭಟನೆ ನಡೆಸಲಾಗಿದೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ  ಮಕರ ಧ್ವಾರದಿಂದ ಪ್ರತಿಭಟನೆ ಮೆರವಣಿಗೆ ಹೊರಟಿದೆ. ಇದರಲ್ಲಿ ವಿಪಕ್ಷಗಳ ಸಂಸದರು, ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದಾರೆ.

ಅಮಿತ್ ಶಾ ರಾಜೀನಾಮೆ ನೀಡಬೇಕು ಹಾಗೂ ಕ್ಷಮೆ ಕೇಳಬೇಕು ಎಂದು ಆಗ್ರಹಿಸಲಾಗಿದೆ. ಬುಧವಾರ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆ ನೇತೃತ್ವದಲ್ಲಿ ಸಂಸತ್ ಒಳಗೆ ಹಾಗೂ ಹೊರಗೆ ಪ್ರತಿಭಟನೆ ನಡೆಸಿದ್ದರು. ಇಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮುಂದಾಳತ್ವದಲ್ಲಿ ಹೋರಾಟ ನಡೆಸಲಾಗುತ್ತಿದೆ. ನೀಲಿ ಟೀ ಶರ್ಟ್ ಹಾಕಿಕೊಂಡು ಬಂದಿದ್ದಾರೆ. ಐ ಆ್ಯಮ್ ಅಂಬೇಡ್ಕರ್ ಎನ್ನುವ ಪ್ಲೇ ಕಾರ್ಡ್ ಹಿಡಿಯಲಾಗಿದೆ.

WhatsApp Group Join Now
Telegram Group Join Now
Share This Article