ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಹಿನ್ನಲೆಯಲ್ಲಿ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ. ಪ್ರಧಾನಿ ಮೋದಿ ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಭಾರತ ಅತ್ಯುತ್ತಮ ನಾಯಕರೊಬ್ಬರನ್ನು ಕಳೆದುಕೊಂಡಿದೆ ಎಂದಿದ್ದಾರೆ. ಮನಮೋಹನ್ ಸಿಂಗ್ ಅವರೊಂದಿಗಿನ ಕೆಲವೊಂದಿಷ್ಟು ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಅವರೊಂದಿಗೆ ಕಳೆದ ಕ್ಷಣಗಳನ್ನು ಮೆಲುಕು ಹಾಕಿದ್ದಾರೆ.
ಹಣಕಾಸು ಸಚಿವರಾಗಿವುದರ ಜೊತೆಗೆ ಹಲವು ಸರ್ಕಾರಿ ಹುದ್ದೆಗಳನ್ನು ನಿಭಾಯಿಸಿದವರು. ದೇಶದ ಆರ್ಥಿಕ ನೀತಿಯ ಮೇಲೆ ಗಟ್ಟಿಯಾದ ಮುದ್ರೆಯನ್ನು ಒತ್ತಿದ್ದಾರೆ. ಭಾರತದ ಪ್ರಧಾನಿಯಾಗಿ ಜನರ ಜೀವನ ಮಟ್ಟ ಸುಧಾರಣೆಗಾಗಿ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರು ಪ್ರಧಾನಿಯಾಗಿದ್ದಾಗ ನಾನು ಗುಜರಾತ್ ಸಿಎಂ ಆಗಿದ್ದೆ. ಹೀಗಾಗಿ ಇಬ್ಬರ ನಡುವೆ ಆಗಾಗ ಸಂವಹನ ನಡೆಯುತ್ತಿತ್ತು. ಅವರ ಬುದ್ಧಿವಂತಿಕೆ, ವಿನಯ ಸದಾ ನೆನಪಿನಲ್ಲಿ ಉಳಿಯುತ್ತದೆ. ಇಂತಹ ದುಃಖದಲ್ಲಿ ಸಮಯದಲ್ಲಿ ಅವರ ಕುಟುಂಬ, ಸ್ನೇಹಿತರು, ಅಭಿಮಾನಿಗಳಲ್ಲಿ ಭಾಗಿಯಾಗಿದ್ದೇನೆ ಎಂದು ಬರೆದಿದ್ದಾರೆ.