ಪ್ರಜಾಸ್ತ್ರ ಸುದ್ದಿ
ತುಮಕೂರು(Tumakoru): ಗೃಹ ಸಚಿವ ಜಿ.ಪರಮೇಶ್ವರ್ ಅವರ ತವರು ಜಿಲ್ಲೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ದೇವರು ಮೈಮೇಲೆ ಬಂದಂತೆ ನಾಟಕವಾಡಿ ದಲಿತ ದಂಪತಿಯನ್ನು ದೇವಸ್ಥಾನದಿಂದ ಹೊರಗೆ ಹಾಕಿದ ಘಟನೆ ನಡೆದಿದೆ. ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರು ಗ್ರಾಮದಲ್ಲಿನ ಅರಸಮ್ಮ ಗುಡಿಗೆ ಹೋದಾಗ ಈ ಘಟನೆ ನಡೆದಿದೆ.
ಗ್ರಾಮಸ್ಥರು ನಡೆದುಕೊಂಡ ರೀತಿಗೆ ಬೇಸರ ವ್ಯಕ್ತಪಡಿಸಿದ ದಂಪತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೇವರ ಬಂದಂತೆ ನಾಟಕವಾಡಿದ ನಾರಾಯಣಪ್ಪನನ್ನು ಬಂಧಿಸಲಾಗಿದೆ. ಕಾಂತಣ್ಣ, ಪ್ರಭಾ, ಅಮೂಲ್ಯ, ಪುಟ್ಟೇಗೌಡ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇವರನ್ನು ಪತ್ತೆ ಹಚ್ಚುವ ಕೆಲಸ ನಡೆದಿದೆ.




