ಪ್ರಜಾಸ್ತ್ರ ಸುದ್ದಿ
ಕೊಪ್ಪಳ(Koppala): ಗಂಗಾವತಿ ತಾಲೂಕಿನ ಜಬ್ಬಲಗುಡ್ಡ ಗ್ರಾಮದಲ್ಲಿ ನಡೆಯುತ್ತಿದ್ದ ಪೊಲೀಸ್ ತರಬೇತಿ ವೇಳೆ ಆಕಸ್ಮಿಕವಾಗಿ ಗುಂಡು ಸಿಡಿದು ಕುರಿ ಕಾಯುತ್ತಿದ್ದ ಮಹಿಳೆಗೆ ಗಾಯವಾಗಿದೆ. ದ್ರಾಕ್ಷಾಯಿನಿ ರೇಣುಕಾ(34) ಎಂಬುವರ ಎಡಗೈಗೆ ಗುಂಡು ತಗುಲಿದೆ. ತಕ್ಷಣ ಮಹಿಳೆಯನ್ನು ಮುನಿರಾಬಾದ್ ಡ್ಯಾಂ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕಳಿಸಿಕೊಡಲಾಯಿತು.
ಪೊಲೀಸ್ ಸಿಬ್ಬಂದಿಗೆ ಗುಂಡು ಹಾರಿಸುವ ತರಬೇತಿ ನೀಡಲಾಗುತ್ತಿತ್ತು. ಈ ವೇಳೆ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಆಕಸ್ಮಿಕವಾಗಿ ಗುಂಡು ತಗುಲಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಮಹಿಳೆಯ ಆರೋಗ್ಯವನ್ನು ವಿಚಾರಿಸಿದ್ದಾರೆ.