ಪ್ರಜಾಸ್ತ್ರ ಸುದ್ದಿ
ಶಿವಮೊಗ್ಗ(Shivamogga): ಅಕ್ರಮ ಮರಳು ದಂಧೆ(Illegal Sand) ನಡೆಯುತ್ತಿರುವುದನ್ನು ತಡೆಯಲು ಹೋದ ಮಹಿಳಾ ಅಧಿಕಾರಿಗೆ ಭದ್ರವಾತಿಯ ಕಾಂಗ್ರೆಸ್ ಶಾಸಕ ಬಿ.ಕೆ ಸಂಗಮೇಶ್ ಅವರ ಪುತ್ರ ಅವಾಚ್ಯ ಬೈಗುಳಗಳ ಮೂಲಕ ನಿಂದಿಸಿರುವುದು ವೈರಲ್ ಆಗಿದೆ. ಇದರ ವಿಡಿಯೋವನ್ನು ಬಿಜೆಪಿ, ಜೆಡಿಎಸ್ ತನ್ನ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ. ಕಾಂಗ್ರೆಸ್ ಸರ್ಕಾರದಲ್ಲಿ ದಕ್ಷ, ಪ್ರಾಮಾಣಿಕ ಅಧಿಕಾರಿಗಳಿಗೆ ರಕ್ಷಣೆಯೇ ಇಲ್ಲವಾಗಿದೆ ಎಂದು ಕಿಡಿ ಕಾರಿದ್ದಾರೆ.
ಭದ್ರಾವತಿಯಲ್ಲಿ ಒಂದು ಪೈಸೆ ಅಭಿವೃದ್ಧಿ ಕೆಲಸ ಮಾಡದ ನಾಲಾಯಕ್ ಕಾಂಗ್ರೆಸ್ ಶಾಸಕ ಸಂಗೇಶ್ ಹಾಗೂ ಅವರ ಮಗ ಬಿ.ಎಸ್ ಬಸವೇಶ ತಾಲೂಕಿನಲ್ಲಿ ಅಕ್ರಮ ಮರಳುಗಾರಿಕೆ, ಗೂಂಡಾಗಿರಿ ಮಾಡಿಕೊಂಡು ಲೂಟಿ ಹೊಡೆಯುತ್ತಿದ್ದಾರೆ ಎಂದು ಜೆಡಿಎಸ್(JDS) ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ ವಾಗ್ದಾಳಿ ನಡೆಸಿದೆ.
ಭದ್ರಾ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಎನ್ನುವ ಮಾಹಿತಿ ಬಂದ ಹಿನ್ನಲೆಯಲ್ಲಿ ಗಣಿ ಇಲಾಖೆ ವಿಜ್ಞಾನಿ ಜ್ಯೋತಿ ಅವರ ತಡರಾತ್ರಿ ಅಲ್ಲಿಗೆ ತೆರಳಿದ್ದಾರೆ. ಅಲ್ಲಿದ್ದವರು ಶಾಸಕರ ಪುತ್ರನಿಗೆ ಫೋನ್ ಮಾಡಿದ್ದಾರೆ. ಆಗ ಅಧಿಕಾರಿ ಜ್ಯೋತಿ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿರುವ ವಿಡಿಯೋ ವೈರಲ್ ಆಗಿದೆ.