Ad imageAd image

ನಟ ದರ್ಶನಗೆ ಮಧ್ಯಂತರ ಜಾಮೀನು

ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನಗೆ ವೈದ್ಯಕೀಯ ಚಿಕಿತ್ಸೆಯ ಕಾರಣಕ್ಕೆ ಹೈಕೋರ್ಟ್ ಇಂದು 6 ವಾರಗಳ ಕಾಲ ಮಧ್ಯಂತರ ಜಾಮೀನು

Nagesh Talawar
ನಟ ದರ್ಶನಗೆ ಮಧ್ಯಂತರ ಜಾಮೀನು
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನಗೆ ವೈದ್ಯಕೀಯ ಚಿಕಿತ್ಸೆಯ ಕಾರಣಕ್ಕೆ ಹೈಕೋರ್ಟ್ ಇಂದು 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ದರ್ಶನ್ ಪರ ಸಿ.ವಿ ನಾಗೇಶ್ ವಾದ ಮಂಡಿಸಿದರು. ತನಿಖಾಧಿಕಾರಿ ಎಸ್ ಪಿಪಿ ಪ್ರಸನ್ನಕುಮಾರ್ ಪ್ರತಿವಾದ ಮಂಡಿಸಿದರು. ವಾದ, ಪ್ರತಿವಾದ ನ್ಯಾಯಾಧೀಶರಾದ ಎಸ್.ವಿಶ್ವಜಿತ್ ಶೆಟ್ಟಿ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದಾರೆ.

ಒಂದು ವಾರದಲ್ಲಿ ವೈದ್ಯಕೀಯ ವರದಿ ಕೊಡಬೇಕು. ಪಾಸ್ ಪೋರ್ಟ್ ಒಪ್ಪಿಸಬೇಕು. ಇಬ್ಬರು ಸ್ಯೂರಿಟಿ, 2 ಲಕ್ಷ ರೂಪಾಯಿ ಬಾಂಡ್ ನೀಡಬೇಕು ಅನ್ನೋದು ಸೇರಿ ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿದೆ. ಬೆಂಗಳೂರು ಹಾಗೂ ಬಳ್ಳಾರಿ ಜೈಲು ಸೇರಿದಂತೆ 140 ದಿನಗಳಿಂದ ಜೈಲಿನಲ್ಲಿದ್ದಾರೆ. ಇಂದು ಸಂಜೆಯೊಳಗೆ ಬಳ್ಳಾರಿ ಜೈಲಿನಿಂದ ಹೊರ ಬರುವ ಸಾಧ್ಯತೆಯಿದೆ.

WhatsApp Group Join Now
Telegram Group Join Now
Share This Article