ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಕರ್ನಾಟಕ ರಾಜ್ಯ ಬಾಲ ವಿಕಾಸ ಅಕಾಡೆಮಿ ಧಾರವಾಡ(Dharwad) ವತಿಯಿಂದ 2023ನೇ ಸಾಲಿನಲ್ಲಿ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದ ಉತ್ತಮ ಪುಸ್ತಕಗಳಿಗೆ ಮಕ್ಕಳ ಚಂದಿರ ಪುಸ್ತಕ(Book) ಪ್ರಶಸ್ತಿಗಾಗಿ ಕೃತಿಗಳನ್ನು ಆಹ್ವಾನಿಸಲಾಗಿದೆ. ಜನವರಿಯಿಂದ ಡಿಸೆಂಬರ್ ತಿಂಗಳ ಅಂತ್ಯದ ಅವಧಿಯಲ್ಲಿ ಪ್ರಕಟವಾದ ಕವನ ಸಂಕಲನ, ಕಥಾ ಸಂಕಲನ, ನಾಟಕ, ಮಕ್ಕಳ ಕಾದಂಬರಿ, ವೈಜ್ಞಾನಿಕ ಲೇಖನಗಳ ಸಂಕಲನ, ಅನುವಾದಿತ ಕೃತಿ, ಮಕ್ಕಳ ಸಾಹಿತ್ಯ ವಿಮರ್ಶಾ ಕೃತಿ ಹೀಗೆ ಏಳು ಪ್ರಕಾರದ ಮಕ್ಕಳ ಸಾಹಿತ್ಯದ ಕೃತಿಗಳನ್ನು ಪ್ರಶಸ್ತಿಗಾಗಿ(Award) ಆಹ್ವಾನಿಸಲಾಗಿದೆ.
ಪ್ರತಿಯೊಂದು ಕೃತಿಯ ನಾಲ್ಕು ಪ್ರತಿಗಳನ್ನು ಹಾಗೂ ಸೂಕ್ತ ದಾಖಲೆಗಳೊಂದಿಗೆ ಆಗಸ್ಟ್ 26ರೊಳಗಾಗಿ ಅಕಾಡೆಮಿಯ(karnataka rajya bala vikas academy) ಕೇಂದ್ರ ಕಛೇರಿ ಯೋಜನಾಧಿಕಾರಿಗಳು, ಚಂದ್ರಿಕಾ ಲೇಔಟ್ ಹಿಂಭಾಗ ಕೆ.ಎಚ್.ಬಿ ಕಾಲೋನಿ, ಲಕಮನಹಳ್ಳಿ ಧಾರವಾಡ-580004 ವಿಳಾಸಕ್ಕೆ ಕಳುಹಿಸಬೇಕು. ಕೊನೆಯ ದಿನಾಂಕದ ನಂತರ ಬಂದ ಹಾಗೂ ಈಗಾಗಲೇ ಬಾಲಗೌರವ ಪ್ರಶಸ್ತಿ ಪಡೆದವರ ಅರ್ಜಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ ಲಿಂಕ್ https://balavikasaacademy.karnataka.gov.in/ ವೀಕ್ಷಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ.ಚವ್ಹಾಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.