ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಕರ್ನಾಟಕ ಸಾಹಿತ್ಯ ಅಕಾಡೆಮಿ, ಹಾವೇರಿ ಜಿಲ್ಲೆಯ ಗೊಟಗೋಡಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಇವರ ಸಹಯೋಗದಲ್ಲಿ ಗಿರಿಜನ ಉಪಯೋಜನೆಯಡಿ 3 ದಿನ ಕಮ್ಮಟ ಆಯೋಜಿಸಲಾಗಿದೆ. ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳ ಕುರಿತು ಏಪ್ರಿಲ್ 21ರಿಂದ 23ರ ತನಕ ಗೊಟಗೋಡಿಯಲ್ಲಿರುವ ಜಾನಪದ ವಿಶ್ವವಿದ್ಯಾಲಯದಲ್ಲಿ ಕಮ್ಮಟ ಆಯೋಜಿಸಲಾಗಿದೆ. ಇದಕ್ಕೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. 20 ರಿಂದ 45 ವರ್ಷದೊಳಗಿನ ಪರಿಶಿಷ್ಟ ಪಂಗಡಕ್ಕೆ ಸೇರಿದ ರಾಜ್ಯದ ಎಲ್ಲ ಭಾಗದವರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 5 ಕೊನೆಯ ದಿನವಾಗಿದೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್ ಸೈಟ್ ನಲ್ಲಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಕರಿಯಪ್ಪ.ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.