ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಭಾರತ ಹಾಗೂ ಪಾಕ್ ನಡುವೆ ಯುದ್ಧದ ವಾತಾವರಣ ಸೃಷ್ಟಿಯಾಗಿರುವುದರಿಂದ, ಐಪಿಎಲ್-2025ರ ಟೂರ್ನಿಯನ್ನು ಅನಿರ್ದಿಷ್ಟಾವಧಿಗೆ ಅಮಾನತು ಮಾಡಲಾಗಿದೆ. ಇಂದು ಬಿಸಿಸಿಐ ಹಾಗೂ ಐಪಿಎಲ್ ಆಡಳಿತ ಮಂಡಳಿ ನಡೆಸಿದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಈ ಮೂಲಕ ಉಳಿದ ಪಂದ್ಯಗಳನ್ನು ಮುಂದಿನ ದಿನಗಳಲ್ಲಿ ನಡೆಸುವ ಸಾಧ್ಯತೆಯಿದೆ. ಇಂದು ಆರ್ ಸಿಬಿ ಹಾಗೂ ಲಖನೌ ಸೂಪರ್ ಜಯಂಟ್ಸ್ ನಡುವೆ ಪಂದ್ಯ ನಡೆಯಬೇಕಿತ್ತು.
ಮಾರ್ಚ್ 22ರಿಂದ ಮೇ 25ರ ತನಕ ದೇಶದ 13 ನಗರಗಳಲ್ಲಿ ಟೂರ್ನಿ ನಡೆಯುತ್ತಿತ್ತು. 74 ಪಂದ್ಯಗಳ ಪೈಕಿ ಈಗಾಗ್ಲೇ 58 ಪಂದ್ಯಗಳು ನಡೆದಿವೆ. ಗುರುವಾರ ರಾತ್ರಿ ಧರ್ಮಶಾಲಾದಲ್ಲಿ ಪಂಜಾಬ್ ಹಾಗೂ ಡೆಲ್ಲಿ ನಡುವಿನ ಪಂದ್ಯ ರದ್ದುಗೊಳಿಸಲಾಯಿತು. ವಿದ್ಯುತ್ ಸಮಸ್ಯೆ ಕಾಣಿಸಿಕೊಂಡು ಆತಂಕ ಮೂಡಿಸಿತ್ತು. ಅದಕ್ಕೂ ಮೊದಲು ಉಗ್ರರ ಬಾಂಬ್ ಬೆದರಿಕೆ ಕರೆ ಬಂದಿತ್ತು.
ದೇಶ ಹೋರಾಟ ನಡೆಸುತ್ತಿರುವ ಸಂದರ್ಭದಲ್ಲಿ ಕ್ರಿಕೆಟ್ ನಡೆಸುವುದು ಸರಿಯಲ್ಲ. ಹೀಗಾಗಿ ಟೂರ್ನಿಯನ್ನು ಅಮಾನತುಗೊಳಿಸಲಾಗಿದೆ ಎಂದು ಬಿಸಿಸಿಐ ತಿಳಿಸಿದೆ. ಉಳಿದ 16 ಪಂದ್ಯಗಳು ಏನಾಗಲಿವೆ ಅನ್ನೋದು ಮುಂದಿನ ದಿನಗಳಲ್ಲಿ ತಿಳಿಯಲಿದೆ.