ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ರಾಜ್ಯಪಾಲರು(Governor) ಸಣ್ಣ ವಿಚಾರಗಳ ಬಗ್ಗೆ ಗಮನ ಕೊಡುತ್ತಿದ್ದಾರೆ. ಕನ್ನಡದಲ್ಲಿ ಸಹಿ ಮಾಡುತ್ತಿಲ್ಲವೆಂದು ಸರ್ಕಾರಕ್ಕೆ ರಾಜ್ಯಪಾಲರು ಪತ್ರ ಬರೆದಿದ್ದಾರೆ. ಕನ್ನಡದಲ್ಲಿರುವ ಪತ್ರಗಳಿಗೆ ಕನ್ನಡದಲ್ಲಿ ಸಹಿ, ಆಂಗ್ಲ ಭಾಷೆಯಲ್ಲಿರುವ ಪತ್ರಗಳಿಗೆ ಆಂಗ್ಲ ಭಾಷೆಯಲ್ಲಿ ಸಹಿ ಮಾಡುವುದು ತಪ್ಪಲ್ಲ. ಇಂತಹ ಕ್ಷುಲ್ಲಕ ವಿಚಾರಗಳಿಗೆ ರಾಜ್ಯಪಾಲರು ಉತ್ತರ ಕೇಳುವುದು ಸರಿಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ವಿಧಾನಸೌಧ ಮುಂಭಾಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಅರ್ಕಾವತಿ ವಿಷಯವನ್ನು ಯಾಕೆ ವಿಧಾನಸಭೆಯಲ್ಲಿ ಪ್ರಸ್ತಾಪಿಸಲಿಲ್ಲ. ಈ ಬಗ್ಗೆ ಸಿ.ಟಿ(C.T Ravi) ರವಿಯವರು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಹಿಂದೆ ಸಚಿವರಾಗಿದ್ದಾಗ ಯಾಕೆ ಕ್ರಮ ತೆಗೆದುಕೊಂಡಿಲ್ಲ. ರಾಜ್ಯಪಾಲರ ಪತ್ರವನ್ನು ಪರಿಶೀಲನೆ ಮಾಡಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.