ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಸಿಲಿಕಾನ್ ಸಿಟಿಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಿರ್ಮಾಣ ಹಂತದಲ್ಲಿರುವ ಕಟ್ಟಡ ಕುಸಿದ ಘಟನೆ ಬಾಬುಸಾಪಾಳ್ಯದಲ್ಲಿ ಮಂಗಳವಾರ ಸಂಜೆ ನಡೆದಿದೆ. ಸುಮಾರು 16 ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು, ಸ್ಥಳೀಯರು ರಕ್ಷಣಾ ಕಾರ್ಯ ನಡೆಸಿದ್ದಾರೆ. ಇವರೆಗೂ ಒಬ್ಬರನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಈ ಬಗ್ಗೆ ಇನ್ನು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.