ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ವಿಜಯ ದಶಮಿಯ ದಿನವೇ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಸುರಿದಿದೆ. ಮುಂದಿನ 7 ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ವಾಯುಭಾರ ಕುಸಿತದಿಂದಾಗಿ ದಕ್ಷಿಣ, ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಮಳೆ ಸಾಧ್ಯತೆಯಿದೆ. ಹೀಗಾಗಿ ಅಲರ್ಟ್ ಘೋಷಿಸಲಾಗಿದೆ.
ರಾಜಧಾನಿ ಬೆಂಗಳೂರಲ್ಲಿ ಇಂದು ಮಧ್ಯಾಹ್ನವೇ ಮಳೆ ಕಾಣಿಸಿಕೊಂಡಿದೆ. ಮೆಜೆಸ್ಟಿಕ್, ಕಾರ್ಪೂರೇಷನ್ ಸರ್ಕಲ್, ಕೆ.ಆರ್ ಮಾರ್ಕೆಟ್, ರಿಚ್ ಮಂಡ್ ಸರ್ಕಲ್ ಸೇರಿ ಹಲವು ಕಡೆ ಮಳೆಯಾಗಿದೆ. ಶಿವಮೊಗ್ಗ, ಹಾವೇರಿ, ಇಲಕಲ್ ನಲ್ಲಿ ಹೆಚ್ಚು ಮಳೆ ಕಾಣಿಸಿಕೊಂಡಿದೆ. ಪಶ್ಚಿಮ ಬಂಗಾಳದಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 7 ದಿನಗಳ ಕಾಲ ಮಳೆ ಕಾಣಿಸಿಕೊಳ್ಳಲಿದೆ.