Ad imageAd image

ಸೂಕ್ತ ಬಸ್ಸಿನ ವ್ಯವಸ್ಥೆಗೆ ಜಯ ಕರ್ನಾಟಕ ಸಂಘಟನೆಯಿಂದ ಮನವಿ

Nagesh Talawar
ಸೂಕ್ತ ಬಸ್ಸಿನ ವ್ಯವಸ್ಥೆಗೆ ಜಯ ಕರ್ನಾಟಕ ಸಂಘಟನೆಯಿಂದ ಮನವಿ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಸಿಂದಗಿ(Sindagi): ಕೋರವಾರ, ಮತ್ತು ಕೊಕಟನೂರ ಗ್ರಾಮಗಳಿಗೆ ಸರಿಯಾಗಿ ಬಸ್ಸಿನ ವ್ಯವಸ್ಥೆಯಿಲ್ಲದ ಪರಿಣಾಮ ಜನರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಕೆಲಸಕ್ಕಾಗಿ, ಶಿಕ್ಷಣಕ್ಕಾಗಿ ಸೇರಿದಂತೆ ಬೇರೆ ಬೇರೆ ಕಾರಣಗಳಿಗೆ ಸಿಂದಿಗೆ ನಿತ್ಯ ನೂರಾರು ಸಂಖ್ಯೆಯಲ್ಲಿ ಸಂಚಾರ ಮಾಡುತ್ತಾರೆ. ಆದರೆ, ಸೂಕ್ತ ಬಸ್ಸಿನ ವ್ಯವಸ್ಥೆಯಿಲ್ಲ. ಹೀಗಾಗಿ ಸಿಂದಗಿಯಿಂದ ಕೊಕಟನೂರ ಮಾರ್ಗವಾಘಿ ಕೋರವಾರ ಗ್ರಾಮಕ್ಕೆ ಬಸ್ಸಿನ ವ್ಯವಸ್ಥೆ ಮಾಡಬೇಕು ಎಂದು ಜಯ ಕರ್ನಾಟಕ ಸಂಘಟನೆ ಹಾಗೂ ಗ್ರಾಮಸ್ಥರ ವತಿಯಿಂದ ಸಿಂದಗಿ ಡಿಪೋ ಮ್ಯಾನೇಜರ್ ಎಂ.ಆರ್ ಲಮಾಣಿ ಅವರಿಗೆ ಮನವಿ ಸಲ್ಲಿಸಲಾಗಿದೆ.

ಮುಂಜಾನೆ 8 ಗಂಟೆಗೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಹಾಗೂ ಮಧ್ಯಾಹ್ನ 2 ರಿಂದ ಸಾಯಂಕಾಲ 6 ಗಂಟೆಯ ನಡುವೆ ಯಾವುದೇ ಬಸ್ಸಿಲ್ಲದೆ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದೆ. ಕೂಡಲೇ ಬಸ್ಸಿನ ಅನುಕೂಲ ಮಾಡಬೇಕು ಎಂದು ಒತ್ತಾಯಿಸಲಾಗಿದೆ. ಇಲ್ಲದಿದ್ದರೆ ಜಯ ಕರ್ನಾಟಕ ಸಂಘಟನೆ ಹಾಗೂ ಗ್ರಾಮದ ಶಾಲಾ ವಿದ್ಯಾರ್ಥಿಗಳು ಸೇರಿ  ರಸ್ತೆ ತಡೆ ಮಾಡಿ ಹೋರಾಟವನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಈ ವೇಳೆ ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ವಕ್ತಾರ ಚನ್ನಪ್ಪಗೌಡ ಬಿರಾದಾರ, ದೇವರ ಹಿಪ್ಪರಗಿ ತಾಲೂಕಾಧ್ಯಕ್ಷ ಸಿದ್ದರಾಮಪ್ಪ ಅವಟಿ, ಶರಣು ಮನಗೂಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article