Ad imageAd image

ನ.20ರಂದು ವಿಜಯಪುರದಲ್ಲಿ ಉದ್ಯೋಗ ಮೇಳ

ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ,  ಸಮರ್ಥನಂ ಅಂಗವಿಕಲರ ಸಂಸ್ಥೆ ಹಾಗೂ ಬಾರ್ಕಲೇಸ್ ಇವರ ಸಹಯೋಗದಲ್ಲಿ ನವೆಂಬರ್ 20, 2024 ರಂದು ಬೆಳಿಗ್ಗೆ

Nagesh Talawar
ನ.20ರಂದು ವಿಜಯಪುರದಲ್ಲಿ ಉದ್ಯೋಗ ಮೇಳ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ,  ಸಮರ್ಥನಂ ಅಂಗವಿಕಲರ ಸಂಸ್ಥೆ ಹಾಗೂ ಬಾರ್ಕಲೇಸ್ ಇವರ ಸಹಯೋಗದಲ್ಲಿ ನವೆಂಬರ್ 20, 2024 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಲಿಂಗದ ಗುಡಿ ರಸ್ತೆಯಲ್ಲಿರುವ ಖೇಡ ಕಾಲೇಜು ಆವರಣದಲ್ಲಿ ಉದ್ಯೋಗ ಮೇಳ ನಡೆಯಲಿದೆ. ಸ್ಥಳೀಯ ಖಾಸಗಿ ಹಾಗೂ ರಾಜ್ಯದ ಪ್ರತಿಷ್ಠಿತ ಎಂಎನ್.ಸಿ ಕಂಪನಿಗಳಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತೆ.

ಈ ಮೇಳದಲ್ಲಿ ವಿಶೇಷಚೇತನರು ಮತ್ತು ಸಾಮಾನ್ಯ ಅಭ್ಯರ್ಥಿಗಳು ಭಾಗವಹಿಸಬಬಹುದಾಗಿದೆ. ಉದ್ಯೋಗ ಮೇಳದಲ್ಲಿ ವಿಶೇಷ ಚೇತನರಿಗೆ ಪ್ರತ್ಯೇಕ ಸಂದರ್ಶನ ವ್ಯವಸ್ಥೆ ಮಾಡಲಾಗಿದೆ.  ಎಸ್ಎಸ್ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಯಾವುದೇ ಪದವಿ ಪಾಸಾದಂತಹ  ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ಶಾಲಾ ದಾಖಲಾತಿಗಳು, ಆಧಾರ್ ಕಾರ್ಡ್, ಬಾಯೋಡೆಟಾಗಳ 5 ಸೆಟ್ ಝರಾಕ್ಸನೊಂದಿಗೆ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 9148157888, 9945000793 ನಂಬರ್ ಗೆ ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ವಿಜಯಪುರ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article