ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಶ್ರೀ ಶಾರದಾ ಇನ್ ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ ಮೆಂಟ್ ನ 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪವನ್ನು ಸ್ವಯಂ ಘೋಷಿತ ದೇವಮಾನ ಚೈತನ್ಯಾನಂದ ಸರಸ್ವತಿ ಎದುರಿಸುತ್ತಿದ್ದು, ದೆಹಲಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಈ ಇನ್ಸ್ ಸ್ಟಿಟ್ಯೂಟ್ ಶೃಂಗೇರಿ ಶಾರದಾ ಪೀಠಕ್ಕೆ ಸೇರಿದ್ದಾಗಿದೆ.
ಈ ಪ್ರಕರಣ ಸಂಬಂಧ ಪೊಲೀಸರು ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಚೈತನ್ಯಾನಂದ ಅವರ ಮೂವರು ಮಹಿಳಾ ಸಹಾಯಕಿಯರನ್ನು ಬಂಧಿಸಿದ್ದಾರೆ. ಆಗಸ್ಟ್ 4ರಂದು ಎಫ್ಐಆರ್ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದ. ಆಗ್ರಾದ ಹೋಟೆಲ್ ವೊಂದರಲ್ಲಿ ತಂಗಿದ್ದ ವೇಳೆ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ.
ಇವನ ಹೆಸರಿನಲ್ಲಿ ವಿವಿಧ ಬ್ಯಾಂಕ್ ಗಳಲ್ಲಿ 8 ಕೋಟಿ ರೂಪಾಯಿ ಠೇವಣಿ ಇಡಲಾಗಿತ್ತು. ಅದನ್ನು ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಬ್ಯಾಂಕ್ ಅಕೌಂಟ್ ತೆರೆಯುವ ಸಂದರ್ಭದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದರು. ಇದರ ಜೊತೆಗೆ ಹಲವಾರ ವಂಚನೆಯ ವಿಚಾರಗಳು ಬೆಳಕಿಗೆ ಬಂದಿವೆ.