ಕೆ-ಸೆಟ್ ತಾತ್ಕಾಲಿಕ ಫಲಿತಾಂಶ ಪ್ರಕಟ

Nagesh Talawar
ಕೆ-ಸೆಟ್ ತಾತ್ಕಾಲಿಕ ಫಲಿತಾಂಶ ಪ್ರಕಟ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಕಳೆದ ನವೆಂಬರ್ 24ರಂದು ನಡೆಸಿದ್ದ ಕೆ-ಸೆಟ್(ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ) ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗದ 41 ವಿಷಯಗಳಿಗೆ ಪರೀಕ್ಷೆ ನಡೆಸಲಾಗಿತ್ತು. 1 ಲಕ್ಷದ 6 ಸಾವಿರದ 433 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. 89,416 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಇದರಲ್ಲಿ 6,302 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ.

ಅರ್ಹತೆ ಪಡೆದವರಲ್ಲಿ 3,275 ಪುರುಷರು, 3020 ಮಹಿಳೆಯರು, 293 ವಿಕಲಚೇತನರು, 7 ತೃತೀಯಲಿಂಗಿಗಳು ಸೇರಿದಂತೆ 6,302 ಜನರು ಅರ್ಹತೆ ಪಡೆದಿದ್ದಾರೆ. ದಾಖಲೆಗಳ ಪರಿಶೀಲನೆ ಬಳಿಕ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪ್ರಮಾಣಪತ್ರ ನೀಡಲಾಗುವುದು ಎಂದು ತಿಳಿಸಲಾಗಿದೆ.

WhatsApp Group Join Now
Telegram Group Join Now
Share This Article