ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಕನ್ನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ವಿಜಯಪುರ ಜಿಲ್ಲೆಗೆ ಪ್ರವೇಶಿಸುವುದಕ್ಕೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇದನ್ನು ಪ್ರಶ್ನಿಸಿ ಸ್ವಾಮೀಜಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಇವರ ಅರ್ಜಿಯನ್ನು ವಜಾಗೊಳಿಸಿರುವ ಹೈಕೋರ್ಟ್, ಜಿಲ್ಲಾಧಿಕಾರಿ ಆದೇಶವನ್ನು ಎತ್ತಿ ಹಿಡಿದಿದೆ. ಕಲಬುರಗಿಯ ಹೈಕೋರ್ಟ್ ನ ಏಕಸದಸ್ಯ ನ್ಯಾಯಪೀಠ ಕಾಯ್ದಿರಿಸಿದ್ದ ತೀರ್ಪನ್ನು ಶುಕ್ರವಾರ ಪ್ರಕಟಿಸಿದೆ.
ಲಿಂಗಾಯತ ಮಠಾಧೀಶರ ವಿರುದ್ಧ ಸ್ವಾಮೀಜಿ ಅವಾಚ್ಯ ಶಬ್ಧಗಳನ್ನು ಬಳಸಿದ್ದರು. ಇದಕ್ಕೆ ರಾಜ್ಯದ ತುಂಬ ವಿರೋಧ ವ್ಯಕ್ತವಾಗಿತ್ತು. ಬಸವನಬಾಗೇವಾಡಿಯಲ್ಲಿ ಅಕ್ಟೋಬರ್ 17, 18ರಂದು ನಡೆಯುವ ಕಾರ್ಯಕ್ರಮದಲ್ಲಿ ಸ್ವಾಮೀಜಿ ಭಾಗವಹಿಸಬೇಕಿತ್ತು. ಇದನ್ನು ವಿರೋಧಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿತ್ತು. ಒಂದು ವೇಳೆ ಬಂದರೆ ಪ್ರತಿಭಟನೆ ಎದುರಿಸಬೇಕಾಗುತ್ತೆ ಎಂದು ಎಚ್ಚರಿಸಲಾಗಿತ್ತು. ಇದರಿಂದ ಶಾಂತಿ ಸುವ್ಯವಸ್ಥೆಗೆ ತೊಂದರೆಯಾಗುತ್ತೆ ಎಂದು ಎಸ್ಪಿ ವರದಿ ನೀಡಿದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಯವರು ಎರಡು ತಿಂಗಳ ಕಾಲ ನಿರ್ಬಂಧ ಹೇರಿ ಆದೇಶಿಸಿದ್ದಾರೆ.




