ಪ್ರಜಾಸ್ತ್ರ ಸುದ್ದಿ
ಕಲಬುರಗಿ(Kalaburagi): ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ ವಸ್ತುಗಳು ಭಸ್ಮವಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಜಿಲ್ಲೆಯ ಚಿಂಚೋಳಿ ತಾಲೂಕಿನ ಫರ್ದಾರ ಮೋತಕಪಳ್ಳಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ. ಮನೆಯಲ್ಲಿದ್ದ ನಾಲ್ವರು ಪಾರಾಗಿದ್ದಾರೆ.
ಮಧ್ಯರಾತ್ರಿ ಸಿಲಿಂಡರ್ ಸೋರಿಕೆಯ ವಾಸನೆ ಬಂದಿದೆ. ಕುಟುಂಬಸ್ಥರು ಹೊರಗೆ ಬಂದಿದ್ದಾರೆ. ಸ್ವಲ್ಪ ಹೊತ್ತಿನಲ್ಲಿಯೇ ಸಿಲಿಂಡರ್ ಸ್ಫೋಟಗೊಂಡಿದೆ. ಇದರಿಂದ ಮನೆಯಲ್ಲಿದ್ದ ನಗದು, ಚಿನ್ನಾಭರಣ ಸೇರಿ ವಸ್ತುಗಳೆಲ್ಲ ಸುಟ್ಟು ಹೋಗಿವೆ. ಅಗ್ನಿ ಶಾಮಕ ಸಿಬ್ಬಂದಿ ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.