ಪ್ರಜಾಸ್ತ್ರ ಸುದ್ದಿ
ಕಲಬುರಗಿ(Kalaburagi): ಕಾರಿನಲ್ಲಿ ಡ್ರಗ್ಸ್ ಸಾಗಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಬಂದ ಮೇರೆಗೆ ಪೊಲೀಸರು ನಗರದ ಹೊರವಲಯದ ತಾವರಗೇರಾ ಹತ್ತಿರ ಕಾರು ತಪಾಸಣೆ ನಡೆಸುತ್ತಿದ್ದ ವೇಳೆ ಆರೋಪಿ ಪೊಲೀಸರ ಮೇಲೆ ಚಾಕುವಿನಿಂದ ಇರಿದು ತಪ್ಪಿಸಿಕೊಳ್ಳಲು ನೋಡಿದ್ದಾನೆ. ಈ ವೇಳೆ ಪಿಎಸ್ಐ ಆರೋಪಿ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.
ಆರೋಪಿ ಸುಪ್ರೀತ್ ನವಲೆ ಎಂಬಾತ ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ. ಕಾರು ತಪಾಸೆಣೆ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ನೋಡಿದಾಗ ಪಿಎಸ್ಐ ರಾಘವೇಂದ್ರ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಡ್ರಗ್ಸ್ ಗೆ ಸಂಬಂಧಿಸಿದಂತೆ ಮಾಹಿತಿ ತಿಳಿದು ಬರಬೇಕಿದೆ.