ಪ್ರಜಾಸ್ತ್ರ ಸುದ್ದಿ
ಕಲಬುರಗಿ(Kalaburagi): ಪ್ರೀತಿ ಮಾಡು ಎಂದು ಬೆನ್ನು ಹತ್ತಿ ಪೀಡಿಸುತ್ತಿದ್ದ ಯವಕನ ಕಿರುಕುಳದಿಂದ ಬೇಸತ್ತು ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇತ್ತೀಚೆಗೆ ನಡೆದಿದೆ. ಈ ಪ್ರಕರಣ ಆರೋಪಿ ಆಟೋ ಚಾಲಕ ಮೆಹಬೂಬ್ ಎಂಬಾತನನ್ನು ಜೇವರ್ಗಿ ಠಾಣೆ ಪೊಲೀಸರು ಬಂಧಿಸಿದ್ದಾರೆ. 8ನೇ ತರಗತಿ ವಿದ್ಯಾರ್ಥಿನಿಗೆ ಈತ ಪ್ರೀತಿಸು ಎಂದು ಪೀಡಿಸುತ್ತಿದ್ದನಂತೆ. ಇದರಿಂದ ಬೇಸತ್ತು ಬಾಲಕಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಬಾಲಕಿ ಅನ್ಯಾಯವಾಗಿ ಪ್ರಾಣ ಕಳೆದುಕೊಳ್ಳುವಂತೆ ಮಾಡಿದ ಆರೋಪಿ ವಿರುದ್ಧ ಅಖಿಲ ಭಾರತ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಆರೋಪಿಯನ್ನು ಶೀಘ್ರದಲ್ಲಿ ಬಂಧಿಸಬೇಕು. ಮೃತ ಬಾಲಕಿ ಕುಟುಂಬಕ್ಕೆ ಪರಿಹಾರ ನೀಡಬೇಕು. ಪೋಕ್ಸೋ ಅಡಿ ಪ್ರಕರಣ ದಾಖಲಿಸಿ ಕಠಿಣ ಶಿಕ್ಷೆಯಾಗುವಂತೆ ಮಾಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು. ಇದೀಗ ಆರೋಪಿ ಮೆಹಬೂಬ್ ಎಂಬಾತನನ್ನು ಬಂಧಿಸಲಾಗಿದೆ.