ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): ಕರ್ನಾಟಕ ಕಾರ್ಯನಿರತ ಪರ್ತಕರ್ತರ ಸಂಘ ಜಿಲ್ಲಾ ಘಟಕ ವಿಜಯಪುರ ವತಿಯಿಂದ 2024ನೇ ಸಾಲಿನಲ್ಲಿ ಕೊಡಮಾಡುವ ಜಿಲ್ಲಾ ವಾರ್ಷಿಕ ಪ್ರಶಸ್ತಿಗೆ ಕನ್ನಡಪ್ರಭ ಸಿಂದಗಿ ತಾಲೂಕು ವರದಿಗಾರ ಸಿದ್ದಲಿಂಗ ಕಿಣಗಿ ಹಾಗೂ ವಿಜಯ ಕರ್ನಾಟಕ ತಾಲೂಕು ವರದಿಗಾರ ಸುದರ್ಶನ ಜಂಗಣ್ಣಿ ಅವರು ಆಯ್ಕೆಯಾಗಿದ್ದಾರೆ ಎಂದು ಕಾನಿಪ ತಾಲೂಕಾಧ್ಯಕ್ಷ ಆನಂದ ಶಾಬಾದಿ ಹೇಳಿದ್ದಾರೆ.
ಜುಲೈ 28ರಂದು ವಿಜಯಪುರದ ಸೋಲಾಪೂರ ರಸ್ತೆಯಲ್ಲಿರುವ ಪೊಲೀಸ್ ಪರೇಡ್ ಮೈದಾನದ ಎದುರಿರುವ ಪೊಲೀಸ್ ಸಮುದಾಯ ಭವನದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.