Ad imageAd image

ಬೆಳಗಾವಿ: ಪೊಲೀಸ್ ವಶಕ್ಕೆ ಕನ್ನಡಪರ ಸಂಘಟನೆ ಕಾರ್ಯಕರ್ತರು

Nagesh Talawar
ಬೆಳಗಾವಿ: ಪೊಲೀಸ್ ವಶಕ್ಕೆ ಕನ್ನಡಪರ ಸಂಘಟನೆ ಕಾರ್ಯಕರ್ತರು
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಳಗಾವಿ(Belagavi): ಎಂಇಎಸ್ ಪುಂಡರ ಹಾವಳಿ ಖಂಡಿಸಿ ಶನಿವಾರ ಕರ್ನಾಟಕ ಬಂದ್ ಗೆ ಕರೆ ಕೊಡಲಾಗಿದೆ. ಇದಕ್ಕೆ ಹಲವು ನಗರಗಳಲ್ಲಿ ಉತ್ತಮ ಬೆಂಬಲ ವ್ಯಕ್ತವಾದರೆ ಉಳಿದ ಜಿಲ್ಲೆಗಳಲ್ಲಿ ನೀರಸ ಪ್ರತಿಕ್ರಿಯೆ ಕಂಡು ಬಂದಿದೆ. ಈ ಬಂದ್ ನ ಕೇಂದ್ರವಾಗಿರುವ ಬೆಳಗಾವಿ ಜಿಲ್ಲೆಯಲ್ಲಿಯೇ ಕನ್ನಡಪರ ಸಂಘಟನೆಯ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡ ಬಣ) ಕಾರ್ಯಕರ್ತರು ರಾಣಿ ಚನ್ನಮ್ಮ ವೃತ್ತದ ಹತ್ತಿರ ಪ್ರತಿಭಟನೆ ನಡೆಸಿದರು.

ಸಂಗೊಳ್ಳಿ ರಾಯಣ್ಣ ವೃತ್ತದಿಂದ ರಾಣಿ ಚನ್ನಮ್ಮ ವೃತ್ತದ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಈ ವೇಳೆ ಎಂಇಎಸ್ ಅನ್ನು ರಾಜ್ಯದಲ್ಲಿ ನಿಷೇಧಿಸಬೇಕು ಎಂದು ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಲಾಯಿತು. ಮಹಾರಾಷ್ಟ್ರ ಏಕೀಕರಣ ಸಮಿತಿ ವಿರುದ್ಧ ಧಿಕ್ಕಾರ ಕೂಗಿ ಕನ್ನಡಿಗರ ಮೇಲೆ ದಬ್ಬಾಳಿಕೆ ಮಾಡುವ ಇಂತವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು. ಈ ವೇಳೆ ಪೊಲೀಸರು ಹೋರಾಟಗಾರರನ್ನು ವಶಕ್ಕೆ ಪಡೆದರು.

WhatsApp Group Join Now
Telegram Group Join Now
Share This Article