ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಈ ವರ್ಷ ನಂಬರ್ 1 ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಸರ್ಕಾರ ತೀರ್ಮಾನಿಸಿದೆ. 50ನೇ ವರ್ಷದ ರಾಜ್ಯೋತ್ಸವ ಇದಾಗಿದೆ. ಶಾಲಾ, ಕಾಲೇಜುಗಳು, ಕಾರ್ಖಾನೆಗಳು ಸೇರಿದಂತೆ ಐಟಿಬಿಟಿ ಕಚೇರಿಗಳಲ್ಲಿಯೂ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಹೇಳಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರಲ್ಲಿ ಶೇಕಡ 50ರಷ್ಟು ಹೊರಗಿನವರಿದ್ದಾರೆ. ನವೆಂಬರ್ 1 ನಮಗೆ ತುಂಬಾ ಮುಖ್ಯವಾದ ದಿನ. ಪ್ರತಿ ಕಚೇರಿಯಲ್ಲಿ ಕನ್ನಡ ಬಾವುಟ ಹಾರಿಸಬೇಕು. ಕನ್ನಡ ರಾಜ್ಯೋತ್ಸವ ಆಚರಿಸಬೇಕು. ಇದನ್ನು ಸರ್ಕಾರವೇ ಆದೇಶಿಸಿರುವುದಿಂದ ಯಾವುದೇ ಸಂಘ ಸಂಸ್ಥೆಗಳು ಒತ್ತಾಯ ಮಾಡಬಾರದು. ರಾಷ್ಟ್ರಧ್ವಜಕ್ಕೆ ಗೌರವ ಕೊಡುವಂತೆ ಕನ್ನಡದ ಬಾವುಟಕ್ಕೂ ಗೌರವ ಸಲ್ಲಿಸಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಬೇಕು ಎಂದು ಹೇಳಿದರು.