Ad imageAd image

ಕನ್ನಡವೆಂದರೆ ಕೇವಲ ಭಾಷೆಯಲ್ಲ ಅದು ಜೀವನ ವಿಧಾನ: ಕವಿ ಡಾ.ಸತ್ಯಮಂಗಲ ಮಹಾದೇವ

Nagesh Talawar
ಕನ್ನಡವೆಂದರೆ ಕೇವಲ ಭಾಷೆಯಲ್ಲ ಅದು ಜೀವನ ವಿಧಾನ: ಕವಿ ಡಾ.ಸತ್ಯಮಂಗಲ ಮಹಾದೇವ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ನಗರದ ಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಕರ್ನಾಟಕ ರಾಜ್ಯ ಬರಹಗಾರರ ಸಂಘ ಜಿಲ್ಲಾ ಘಟಕ ಬೆಂಗಳೂರು ಹಾಗೂ ಜ್ಯೋತಿ ಪದವಿ ಪೂರ್ವ ಕಾಲೇಜು, ಯಶವಂತಪುರ ಇವರ ಸಹಯೋಗದಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕವಿ ಡಾ.ಸತ್ಯಮಂಗಲ ಮಹಾದೇವ, ಭಾಷೆಯು ಸಂವಹನಕ್ಕೆ ಮಾತ್ರ ಸೀಮಿತವಾಗದೆ ಅದು ಜೀವನ ವಿಧಾನವಾಗಿದೆ. ನಮಗೆ ಆಂಗ್ಲ ಭಾಷೆಯಲ್ಲಿ ಕನಸು ಬೀಳುವುದಿಲ್ಲ. ಏಕೆಂದರೆ ಮೆದುಳು ಹಾಗೂ ಮನಸ್ಸು ಅರ್ಥ ಮಾಡಿಕೊಂಡ ಕರ್ನಾಟಕ ಪರಿಸರದ ಕನ್ನಡ ಭಾಷೆಗೆ ಇರುವ ಇತಿಹಾಸವನ್ನು ಅರ್ಥ ಮಾಡಿಕೊಂಡು ವರ್ತಮಾನದ ಸಂದರ್ಭದಲ್ಲಿ ನಮ್ಮ ಪೂರ್ವಜರು ನಡೆದ ಹಾದಿಯಲ್ಲಿ ಭಾಷೆ ಶ್ರೀಮಂತಿಕೆಯನ್ನು ಹೆಚ್ಚಿಸುತ್ತಾ ಭವಿಷ್ಯತ್ತನ್ನು ಕಟ್ಟಬೇಕಿದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಚಂದ್ರಶೇಖರ ಹಡಪದ  ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜ್ಯೋತಿ ಪಿಯು ಕಾಲೇಜಿನ ಪ್ರಾಂಶುಪಾಲರಾದ ಮಂಜುನಾಥ್.ಎನ್, ಕಾರ್ಯದರ್ಶಿ ಹರ್ಷ ಬಿ.ಆರ್, ಕನ್ನಡ ವಿಭಾಗದ ಮುಖ್ಯಸ್ಥರು ಮತ್ತು ಕರ್ನಾಟಕ ರಾಜ್ಯ ಬರಹಗಾರರ ಸಂಘ ಬೆಂಗಳೂರು ನಗರ ಜಿಲ್ಲಾಧ್ಯಕ್ಷರಾದ ಆನಂದಕುಮಾರ್ ಯಾದವ್, ಅರ್ಥಶಾಸ್ತ್ರ ಉಪನ್ಯಾಸಕರಾದ ಶ್ರೀನಾಥ್, ಆಂಗ್ಲ ಭಾಷೆ ಉಪನ್ಯಾಸಕರಾದ ಜ್ಞಾನಶಂಕರ್, ರಾಸಾಯನಶಾಸ್ತ್ರ ಉಪನ್ಯಾಸಕರಾದ ಅಮೃತ,  ಜೀವಶಾಸ್ತ್ರ ಉಪನ್ಯಾಸಕರಾದ ಇಷಾರ್ಥ್ ಸೇರಿದಂತೆ ಕವಿ ಗೋಷ್ಠಿಯಲ್ಲಿ ಭಾಗವಹಿಸಿದ ಕವಿಗಳು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article