ಪ್ರಜಾಸ್ತ್ರ ಸುದ್ದಿ
ಮೈಸೂರು(Mysore): ನಗರದ ಪ್ರದರ್ಶಕ ಕಲೆಗಳ ಸಂಸ್ಥೆ ಮತ್ತು ಸಂಶೋಧನ ಕೇಂದ್ರವಾದ ‘ನಾಟ್ಯ’ ಎನ್ನುವ ಸಂಸ್ಥೆ ನೀಡುವ 2024ನೇ ಸಾಲಿನ ‘ಕನ್ನಡ ಕಲಾರತ್ನ’ ರಾಜ್ಯಮಟ್ಟದ ಪ್ರಶಸ್ತಿಗೆ ಯುವ ಕವಿ ಎಸ್.ಶಿಶಿರಂಜನ್(ಶಿಶಿರ) ಅವರನ್ನು ಆಯ್ಕೆ ಮಾಡಲಾಗಿದೆ. ಸಾಹಿತ್ಯ ಕ್ಷೇತ್ರದಿಂದ ಇವರನ್ನು ಆಯ್ಕೆ ಮಾಡಲಾಗಿದೆ.
ಸಾಹಿತ್ಯ, ರಂಗಭೂಮಿ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಕಳೆದ ಎರಡು ದಶಕಗಳಿಂದ ಸಲ್ಲಿಸಿರುವ ಗಣನೀಯ ಸೇವೆಯನ್ನು ಪರಿಗಣಿಸಿ ಅವರನ್ನು ನವೆಂಬರ್ 10ರಂದು ನಗರದ ಟೌನ್ ಹಾಲ್ ನಲ್ಲಿ ನಡೆಯುವ ಸಂಸ್ಥೆಯ ವಾರ್ಷೀಕೋತ್ಸವ ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಗುವುದು ಎಂದು ತಿಳಿಸಲಾಗಿದೆ.