Ad imageAd image

ಸಿಂದಗಿ: ತಾಲೂಕಿನಾದ್ಯಂತ ಸಂಭ್ರಮದ ಕನ್ನಡ ರಾಜ್ಯೋತ್ಸವ

ತಾಲೂಕಿನಾದ್ಯಂತ ಸಂಭ್ರಮ ಸಡಗರದಿಂದ 69ನೇ ಕನ್ನಡ ರಾಜ್ಯೋತ್ಸವವನ್ನು ಶುಕ್ರವಾರ ಆಚರಿಸಲಾಯಿತು.

Nagesh Talawar
ಸಿಂದಗಿ: ತಾಲೂಕಿನಾದ್ಯಂತ ಸಂಭ್ರಮದ ಕನ್ನಡ ರಾಜ್ಯೋತ್ಸವ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಸಿಂದಗಿ(Sindagi): ತಾಲೂಕಿನಾದ್ಯಂತ ಸಂಭ್ರಮ ಸಡಗರದಿಂದ 69ನೇ ಕನ್ನಡ ರಾಜ್ಯೋತ್ಸವವನ್ನು ಶುಕ್ರವಾರ ಆಚರಿಸಲಾಯಿತು. ಪಟ್ಟಣದಲ್ಲಿ ತಾಲೂಕು ಆಡಳಿತ ಹಾಗೂ ತಾಲೂಕು ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು. ಮುಂಜಾನೆ ಸುಮಾರು 9ಗಂಟೆಗೆ ತಾಲೂಕು ಆಡಳಿತ ಕಚೇರಿಯಲ್ಲಿ ಶಾಸಕ ಅಶೋಕ ಮನಗೂಳಿ ಹಾಗೂ ತಹಶೀಲದಾರ್ ಪ್ರದೀಪಕುಮಾರ ಹಿರೇಮಠ ಸೇರಿದಂತೆ ಗಣ್ಯರು ರಾಷ್ಟ್ರಧ್ವಜ ಹಾಗೂ ನಾಡ ಧ್ವಜಾರೋಹಣ ನೆರವೇರಿಸಿದರು. ಇಲ್ಲಿಂದ ವಿವಿಧ ಕಲಾ ತಂಡಗಳೊಂದಿಗೆ ಕನ್ನಡ ವೃತ್ತದ ತನಕ ಮೆರವಣಿಗೆ ನಡೆಸಿ ಅಲ್ಲಿ ಪೂಜೆ ಸಲ್ಲಿಸಲಾಯಿತು.

ಕನ್ನಡ ವೃತ್ತದಿಂದ ಬಸವೇಶ್ವರ ವೃತ್ತ, ವಿವೇಕಾನಂದ ವೃತ್ತ, ಟಿಪ್ಪು ಸುಲ್ತಾನ್ ವೃತ್ತ, ಅಂಬೇಡ್ಕರ್ ವೃತ್ತ, ಅಂಬಿಗರ ಚೌಡಯ್ಯನ ವೃತ್ತದ ಮೂಲಕ ಮೆರವಣಿಗೆ ಸಾಗಿ ಬಸವ ಮಂಟಪದಲ್ಲಿ ಸಮಾಪ್ತಿಗೊಂಡಿತು. ಮೆರವಣಿಗೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಕನ್ನಡಪರ, ರೈತಪರ, ದಲಿತಪರ ಸಂಘಟನೆಗಳ ಮುಖಂಡರು ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು, ವಿವಿಧ ಸಂಘ, ಸಂಸ್ಥೆಗಳ ಮುಖಂಡರು, ಸಾರ್ವಜನಿಕರು ಹೆಜ್ಜೆ ಹಾಕಿದರು. ಪಟ್ಟಣದ ಸರ್ಕಾರಿ ಕನ್ನಡ ಹಿರಿಯ ಮಾಧ್ಯಮ ಶಾಲೆಯ ಮುಖ್ಯಗುರುಗಳಾದ ಶರಣಬಸಪ್ಪ ಎಸ್.ಲಂಗೋಟಿ ವಿಶೇಷ ಉಪನ್ಯಾಸ ನೀಡಿದರು. ರೇಷ್ಮೆ ನಿರೀಕ್ಷಕರಾದ ವಿಜಯ ಯಂಕಂಚಿ ಕವನ ವಾಚಿಸಿದರು.

ಚಟ್ಟಹಲಗಿ, ಡೊಳ್ಳು ಕುಣಿತ ಸೇರಿದಂತೆ ವಿವಿಧ ಜಾನಪದ ವಾದ್ಯಗಳ ಪ್ರದರ್ಶನ ನೋಡುಗರ ಕಣ್ಮನ ಸೆಳೆಯಿತು. ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನಿಸಲಾಯಿತು. ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಕನ್ನಡಕ್ಕೆ 125ಕ್ಕೆ 125 ಅಂಕ ಪಡೆದ 14 ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಈ ವೇಳೆ ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ, ಪುರಸಭೆ ಅಧ್ಯಕ್ಷ ಶಾಂತವೀರ ಬಿರಾದಾರ, ಉಪಾಧ್ಯಕ್ಷ ರಾಜಣ್ಣ ನಾರಾಯಣಕರ, ಪುರಸಭೆ ಮುಖ್ಯಾಧಿಕಾರಿ ಎಸ್.ರಾಜಶೇಖರ, ತಾಲೂಕು ಪಂಚಾಯ್ತಿ ಇಒ  ರಾಮು ಜಿ.ಅಗ್ನಿ, ನೌಕರರ ಸಂಘದ ತಾಲೂಕಾಧ್ಯಕ್ಷ ಅಶೋಕ ತೆಲ್ಲೂರ, ಕಸಾಪ ತಾಲೂಕಾಧ್ಯಕ್ಷ ಶಿವಾನಂದ ಬಡಾನವರ, ಕನ್ನಡಪರ ಸಂಘಟನೆಯ ಮುಖಂಡರಾದ ಸಂತೋಷ ಮಣಗಿರಿ, ನಿಂಗರಾಜ ಅತನೂರ, ಸಂತೋಷ ಪಾಟೀಲ ಡಂಬಳ, ಪೀರು ಕೆರೂರು, ಚಂದ್ರಶೇಖರ ದೇವರೆಡ್ಡಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

WhatsApp Group Join Now
Telegram Group Join Now
Share This Article