ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಮುಡಾ(MUDA) ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಕ್ಷಣೆಗಾಗಿ ಸಚಿವ ಭೈರತಿ ಸುರೇಶ್(Byrathi Suresh) ಅವರು ಎಲ್ಲ ಕಡತಗಳನ್ನು ಸುಟ್ಟಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. ಶನಿವಾರ ಪಕ್ಷದ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿಮ್ಮ ನಗರಾಭಿವೃದ್ಧಿ ಸಚಿವರು ಮೈಸೂರಿಗೆ ಹೋಗಿ 1997ರ ನಂತರದ ಎಲ್ಲ ದಾಖಲೆಗಳನ್ನು ಸುಟ್ಟು ಹಾಕಿದ್ದಾರೆ ಅಂತಾ ಹೇಳಿದರು.
ಸಚಿವ ಭೈರತಿ ಸುರೇಶರನ್ನು ಬಂಧಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಭಾಮೈದ ಹಾಗೂ 4ನೇ ಆರೋಪಿ ಜೆ.ದೇವರಾಜು ವಿರುದ್ಧ ಮಾತ್ರ ತನಿಖೆ ಅಲ್ಲ. ಸಿಎಂ ಹಾಗೂ ಅವರ ಪತ್ನಿ ವಿರುದ್ಧ ತನಿಖಾ ಸಂಸ್ಥೆಗಳು ತನಿಖೆ ನಡೆಸಬೇಕು. ಮುಡಾ ಅಧ್ಯಕ್ಷ ಕೆ.ಮರಿಗೌಡ ರಾಜೀನಾಮೆ ನೀಡಿದರೆ ಸಾಲದು. ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.