ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಕೇಂದ್ರ ಚುನಾವಣೆ ಆಯೋಗ ಇಂದು ಕಣಿವೆ ನಾಡು ಜಮ್ಮು ಮತ್ತು ಕಾಶ್ಮೀರ್ ಹಾಗೂ ಹರಿಯಾಣ ರಾಜ್ಯಗಳ ವಿಧಾನಸಭೆಯ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಅಕ್ಟೋಬರ್ 1ರಿಂದ ಮೂರು ಹಂತದಲ್ಲಿ ಜಮ್ಮು ಕಾಶ್ಮೀರದಲ್ಲಿ ಚುನಾವಣೆ ನಡೆಯಲಿದೆ. ಹರಿಯಾಣದಲ್ಲಿ 1 ಹಂತದಲ್ಲಿ ಮತದಾನ ನಡೆಯಲಿದೆ. ಅಕ್ಟೋಬರ್ 4ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಇದೇ ಕರ್ನಾಟಕದ ಮೂರು ವಿಧಾನಸಭಾ ಉಪ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತೆ ಎನ್ನುವ ನಿರೀಕ್ಷೆ ಇತ್ತು, ಅದಾಗಿಲ್ಲ.
ಹಾವೇರಿಯಿಂದ ಬಿಜೆಪಿಯ ಬಸವರಾಜ್ ಬೊಮ್ಮಯಿ ಸಂಸದರಾಗಿದ್ದು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ ತೆರವಾಗಿದೆ. ಮಂಡ್ಯದಿಂದ ಜೆಡಿಎಸ್ ನ ಹೆಚ್.ಡಿ ಕುಮಾರಸ್ವಾಮಿ ಸಂಸದರಾಗಿದ್ದು, ಚೆನ್ನಪಟ್ಟಣ ವಿಧಾನಸಭಾ ಕ್ಷೇತ್ರ ಖಾಲಿ ಉಳಿದಿದೆ. ಬಳ್ಳಾರಿಯಿಂದ ಕಾಂಗ್ರೆಸ್ ನ ಈ.ತುಕಾರಂ ಸಂಸದರಾಗಿದ್ದು, ಸಂಡೂರು ವಿಧಾನಸಭಾ ಕ್ಷೇತ್ರ ತೆರವಾಗಿದೆ. ಈ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಬೇಕಿದೆ. ದೇಶದಲ್ಲಿ ಒಟ್ಟು 46 ಲೋಕಸಭಾ, ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಶೀಘ್ರ ದಿನಾಂಕ ಘೋಷಣೆ ಮಾಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗದ ಆಯುಕ್ತ ರಾಜೀವ್ ಕುಮಾರ್(rajiv kumar) ಹೇಳಿದ್ದಾರೆ.