Ad imageAd image

ನಟ ರಣವೀರ್ ಸಿಂಗ್ ಗೆ ಕರ್ನಾಟಕ ಹೈಕೋರ್ಟ್ ಕ್ಲಾಸ್

Nagesh Talawar
ನಟ ರಣವೀರ್ ಸಿಂಗ್ ಗೆ ಕರ್ನಾಟಕ ಹೈಕೋರ್ಟ್ ಕ್ಲಾಸ್
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಕನ್ನಡದ ಕಾಂತಾರ-1 ಸಿನಿಮಾದ ದೈವಪಾತ್ರಗಳನ್ನು ಅವಹೇಳನ ಮಾಡಿದ ಆರೋಪ ಎದುರಿಸುತ್ತಿರುವ ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಕರ್ನಾಟಕ ಹೈಕೋರ್ಟ್ ಕ್ಲಾಸ್ ತೆಗೆದುಕೊಂಡಿದೆ. ರಣವೀರ್ ಸಿಂಗ್ ದೊಡ್ಡ ನಟ ಇರಬುದು. ಆದ್ರೆ, ಇನ್ನೊಬ್ಬರ ಧಾರ್ಮಿಕ ಭಾವನೆಗಳನ್ನು ಚೇಷ್ಟೆ ಮಾಡಿ ಅಣಕಿಸುವುದು ಸರಿಯಲ್ಲ ಎಂದು ಎಚ್ಚರಿಕೆ ನೀಡಿದೆ.

ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ಧ ಪೀಠ ಮಂಗಳವಾರ ವಿಚಾರಣೆ ನಡೆಸಿತು. ನಟ ತನಿಖೆಗೆ ಸಹಕರಿಸಬೇಕು. ಸಹಕರಿಸಿದರೆ ಅವರ ವಿರುದ್ಧ ಆತುರದ ನಿರ್ಧಾರ ಬೇಡ ಎಂದು ಹೇಳಿದರು. ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಪ್ರಾಸಿಕ್ಯೂಷನ್ ಗೆ ನಿರ್ದೇಶಿಸಿ ವಿಚಾರಣೆಯನ್ನು ಮುಂದೂಡಲಾಯಿತು.

ನಟ ರಣವೀರ್ ಸಿಂಗ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಅಲ್ಲದೆ ನಗರದ ಮಾಜಿಸ್ಟ್ರೇಟ್ ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲಾಗಿದೆ. ಇವುಗಳನ್ನು ರದ್ದುಗೊಳಿಸಬೇಕು ಎಂದು ನಟ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ಮಂಗಳವಾರ ನಡೆಯಿತು.

WhatsApp Group Join Now
Telegram Group Join Now
Share This Article