ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): ಪಟ್ಟಣದ ತಾಲೂಕು ಆಡಳಿತ ಕಚೇರಿ ಆವರಣದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕಳೆದೊಂದು ವಾರದಿಂದ ಗ್ರಾಮ ಆಡಳಿತಾಧಿಕಾರಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಅನಿರ್ಧಿಷ್ಟಾವಧಿ ಧರಣಿಯನ್ನು ಸಿಂದಗಿ, ಆಲಮೇಲ, ದೇವರ ಹಿಪ್ಪರಗಿ ಭಾಗದ ಗ್ರಾಮಗಳ ಗ್ರಾಮ ಆಡಳಿತಾಧಿಕಾರಿಗಳು ನಡೆಸುತ್ತಿದ್ದು, ವಿವಿಧ ಸಂಘ, ಸಂಸ್ಥೆಗಳು, ರಾಜಕೀಯ ನಾಯಕರು ಬೆಂಬಲ ನೀಡುತ್ತಿದ್ದಾರೆ. ಇಂದು ಕರ್ನಾಟಕ ಜನ ಸೈನ್ಯ ವತಿಯಿಂದ ಪ್ರತಿಭಟನಾ ನಿರತರಿಗೆ ಬೆಂಬಲ ಸೂಚಿಸುವ ಮೂಲಕ ನಿಮ್ಮೊಂದಿಗೆ ನಾವಿದ್ದೇವೆ ಎಂದು ಹೇಳಲಾಯಿತು.
ಕರ್ನಾಟಕ ಜನ ಸೈನ್ಯ ವಿಜಯಪುರ ಜಿಲ್ಲಾ ಅಧ್ಯಕ್ಷ ರವಿಕಾಂತ ನಾಟಿಕಾರ, ಜಿಲ್ಲಾ ಕಾರ್ಯದರ್ಶಿ ಪುಂಡಲೀಕ ಎಸ್.ಬಿರಾದಾರ, ತಾಲೂಕು ಯುವ ಘಟಕದ ಅಧ್ಯಕ್ಷ ಆಕಾಶ ಬಿರಾದಾರ ಮತ್ತು ಗೌರವಾಧ್ಯಕ್ಷ ಅಕ್ಷಯ ಹಿರೇಮಠ ಸೇರಿದಂತೆ ಇನ್ನು ಹಲವಾರು ಪ್ರತಿಭಟನೆಯಲ್ಲಿ ಭಾಗವಹಿಸಿ ಬೆಂಬಲ ನೀಡಿದರು. ನಿಮ್ಮ ಸೂಕ್ತವಾದ ಹಾಗೂ ನ್ಯಾಯಸಮ್ಮತವಾದ ಬೇಡಿಕೆಗಳ ಈಡೇರಿಕೆಗಾಗಿ ನಾವೆಲ್ಲ ಜೊತೆಗೆ ನಿಲ್ಲುತ್ತೇವೆ ಎಂದು ಮುಖಂಡರು ಹೇಳಿದರು. ಈ ವೇಳೆ ಗ್ರಾಮ ಆಡಳಿತಾಧಿಕಾರಿಗಳ ಸಂಘದ ತಾಲೂಕಾಧ್ಯಕ್ಷ ಅಬ್ಬಾಸ್ ಅಲಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.