ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaluru): ಸ್ಯಾಂಡಲ್ ವುಡ್ ಸಾಹಸಿಂಹ ದಿ.ಡಾ.ವಿಷ್ಣುವರ್ಧನ್ ಹಾಗೂ ಅಭಿನೇತ್ರಿ ಬಿ.ಸರೋಜಾದೇವಿ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಿಸಿದೆ. ಗುರುವಾರ ನಡೆದ ಸಚಿವ ಸಂಪುಟ ಬಳಿಕ ಕಾನೂನು ಸಚಿವ ಹೆಚ್.ಕೆ ಪಾಟೀಲ ಈ ಬಗ್ಗೆ ತಿಳಿಸಿದ್ದಾರೆ.
ಇನ್ನು ರಾಷ್ಟ್ರಕವಿ ಕುವೆಂಪು ಅವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.