ಪ್ರಜಾಸ್ತ್ರ ಸುದ್ದಿ
ಮೈಸೂರು(Mysore): ರಾಷ್ಟ್ರಪ್ರಶಸ್ತಿ(National Award) ವಿಜೇಯತ ಬಾಲನಟ ರೋಹಿತ್ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಇತನ ತಾಯಿಗೂ ತೀವ್ರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಶ್ರೀರಂಗಪಟ್ಟಣದಲ್ಲಿ ನಡೆದ ಮಕ್ಕಳ ದಿನಾಚರಣೆಯ ಕಾರ್ಯಕ್ರಮ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗುತ್ತಿದ್ದ ವೇಳೆ ಶನಿವಾರ ತಡರಾತ್ರಿ ಬಸ್ ವೊಂದರ ನಡುವೆ ಅಪಘಾತವಾಗಿದೆ. ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಕಾರಿನಲ್ಲಿ ಬಾಲನಟ ರೋಹಿತ್, ತಾಯಿ, ಒಬ್ಬರು ಉಪನ್ಯಾಸಕರು ಹಾಗೂ ಆತನ ಸ್ನೇಹಿತರಿದ್ದರು. ಕೇರಳ ಮೂಲದ ಪ್ರವಾಸಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಎಲ್ಲರಿಗೂ ಗಂಭೀರ ಗಾಯಗಳಾಗಿವೆ ಎಂದು ಹೇಳಲಾಗುತ್ತಿದೆ. ‘ಒಂದಲ್ಲ ಎರಡಲ್ಲ’ ಸಿನಿಮಾದಲ್ಲಿ ನಟನೆಗಾಗಿ ರೋಹಿತ್ ರಾಷ್ಟ್ರಪ್ರಶಸ್ತಿ ಪಡೆದಿದ್ದಾನೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕಾಟೇರ ಸಿನಿಮಾದಲ್ಲಿಯೂ ಪ್ರಮುಖ ಪಾತ್ರದಲ್ಲಿ ಮಿಂಚಿದ್ದಾನೆ. ಆದಷ್ಟು ಬೇಗ ಗುಣಮುಖರಾಗಲಿ ಎಂದು ಎಲ್ಲರೂ ಹಾರೈಸಿದ್ದಾರೆ.