ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಪೋಸ್ಟ್ ವೊಂದು ಭಾರೀ ಸಂಚಲನ ಮೂಡಿಸಿದೆ. ಯಾಕಂದರೆ, ಅಲ್ಲಿರುವ ಸಾಲುಗಳು. ಕೊಟ್ಟ ಮಾತು ಉಳಿಸಿಕೊಳ್ಳುವುದು ಜಗತ್ತಿನಲ್ಲಿ ದೊಡ್ಡ ಶಕ್ತಿ. ನ್ಯಾಯಾಧೀಶರಾಗಲಿ, ಅಧ್ಯಕ್ಷರಾಗಲಿ, ನಾನಾಗಲಿ, ಬೇರೆ ಯಾರೇ ಆಗಲಿ ಎಲ್ಲರೂ ನುಡಿದಂತೆ ನಡೆಯಬೇಕು. ಕೊಟ್ಟ ಮಾತು ಉಳಿಸಿಕೊಳ್ಳಬೇಕು ಅನ್ನೋ ಸಾಲುಗಳನ್ನು ಹೊಂದಿರುವ ಇಂಗ್ಲಿಷ್ ಬರಹವೊಂದನ್ನು ಪೋಸ್ಟ್ ಮಾಡಿದ್ದಾರೆ.
ರಾಜ್ಯದಲ್ಲಿ ಅಧಿಕಾರಿ ಹಂಚಿಕೆ ಚರ್ಚೆ ಜೋರಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನಡುವೆ ಹೈಕಮಾಂಡ್ ಸಮ್ಮುಖದಲ್ಲಿ ಅಧಿಕಾರ ಹಂಚಿಕೆಯ ಮಾತುಕತೆ ನಡೆದಿದೆ ಎಂದು ಹೇಳಲಾಗುತ್ತಿದೆ. ಎರಡೂವರೆ ವರ್ಷದ ಬಳಿಕ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಬೇಕು ಎಂದು ಸಿದ್ದರಾಮಯ್ಯಗೆ ಹೇಳಿದ್ದರಂತೆ. ಆದರೆ, ಈ ಬಗ್ಗೆ ಈ ಇಬ್ಬರು ನಾಯಕರು ಬಹಿರಂಗವಾಗಿ ಏನೂ ಹೇಳುತ್ತಿಲ್ಲ. ಸಿಎಂ ಹೈಕಮಂಡ್ ಕಡೆ ಬೊಟ್ಟು ಮಾಡಿ ಅವರು ಮುಂದುವರೆಯಿರಿ ಎಂದರೆ ಮುಂದುವರೆಯುತ್ತೇನೆ ಎಂದಿದ್ದಾರೆ.




