ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ರಾಷ್ಟ್ರ ರಾಜಧಾನಿಯ ವಿಧಾನಸಭೆ ಚುನಾವಣೆ ಫೆಬ್ರವರಿ ತಿಂಗಳಲ್ಲಿ ನಡೆಯಲಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮಾಜಿ ಸಿಎಂ, ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ಮುಂಬರುವ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳದೆ ಸ್ವತಂತ್ರವಾಗಿ ಸ್ಪರ್ಧಿಸುತ್ತೇವೆ ಎಂದಿದ್ದಾರೆ. ಕಾಂಗ್ರೆಸ್ ಸೇರಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳದೆ ಹೋರಾಟ ನಡೆಸುತ್ತದೆ ಎಂದು ಬುಧವಾರ ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ ಎದುರಿಸಲು ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಳ್ಳುತ್ತೆ ಎನ್ನುವ ಚರ್ಚೆಗಳಿಗೆ ತೆರೆ ಎಳೆದಿದ್ದಾರೆ. ಕಳೆದ ಎರಡು ಅವಧಿಗಳಿಂದ ಆಪ್ ಪಕ್ಷ ಅಧಿಕಾರದಲ್ಲಿದೆ. ಅರವಿಂದ್ ಕೇಜ್ರಿವಾಲ್ ವಿರುದ್ಧದ ಅಬಕಾರಿ ನೀತಿ ಹಗರಣದ ಪ್ರಕರಣದಿಂದಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಆತಿಶಿ ಸಿಎಂ ಆಗಿದ್ದಾರೆ. ಕಾಂಗ್ರೆಸ್, ಬಿಜೆಪಿ ದೆಹಲಿಯನ್ನು ಮರಳಿ ತಮ್ಮ ತೆಕ್ಕೆಗೆ ಪಡೆಯಲು ಹವಣಿಸುತ್ತಿವೆ.