ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಆರೋಪ ಹೊತ್ತಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್(arvind kejriwal), ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ(manish sisodia) ಹಾಗೂ ಬಿಆರ್ ಎಸ್ ನಾಯಕಿ ಕವಿತಾ(k kavitha) ಅವರ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ ಮಾಡಲಾಗಿದೆ. ಹೀಗಾಗಿ ಜಾಮೀನು ಮೇಲೆ ಹೊರಗೆ ಬರಬೇಕು ಅನ್ನೋ ಅವರ ಪ್ರಯತ್ನಗಳು ವಿಫಲವಾಗುತ್ತಿವೆ.
ಭ್ರಷ್ಟಾಚಾರ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಅವಧಿ ಆಗಸ್ಟ್ 8 ಹಾಗೂ ಅಬಕಾರಿ ನೀತಿ ಹಗರಣದಲ್ಲಿ ಆಗಸ್ಟ್ 31ರ ತನಕ ವಿಸ್ತರಣೆ ಮಾಡಲಾಗಿದೆ. ಇನ್ನು ಮನೀಶ್ ಸಿಸೋಡಿಯಾ ಹಾಗೂ ಕೆ.ಕವಿತಾ ಅವರನ್ನು ಆಗಸ್ಟ್ 31ರ ತನಕ ನ್ಯಾಯಾಂಗ ಬಂಧನಕ್ಕೆ(judicial custody) ನೀಡಲಾಗಿದೆ. ಇಡಿ ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ಸಿಕ್ಕರೂ ಜಾಮೀನು(Bail) ಬಾಂಡ್ ಒದಗಿಸಿದ ಕಾರಣ ತಿಹಾರ್ ಜೈಲು ಪಾಲಾಗಿದ್ದಾರೆ. ಇಂದು ವಿಡಿಯೋ ಕಾನ್ಫ್ ರೆನ್ಸ್ ಮೂಲಕ ವಿಚಾರಣೆ ನಡೆಸಿ ನ್ಯಾಯಾಂಗ ಬಂಧನ ವಿಸ್ತರಿಸಲಾಯಿತು.