ಪ್ರಜಾಸ್ತ್ರ ಸುದ್ದಿ
ಯಾದಗಿರಿ(Yadagiri): ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪುರಸಭೆ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಕ್ಷದ ಪಾಲಾಗಿದೆ. ಈ ಮೂಲಕ ಬಹುಮತ ಹೊಂದಿದ್ದರೂ ಬಿಜೆಪಿ ಅಧ್ಯಕ್ಷ ಸ್ಥಾನ ಪಡೆಯುವಲ್ಲಿ ವಿಫಲವಾಗಿದೆ. ಇಲ್ಲಿನ ಪುರಸಭೆಯ 23 ಸ್ಥಾನಗಳಲ್ಲಿ ಕಾಂಗ್ರೆಸ್ 8 ಸದಸ್ಯರಿದ್ದಾರೆ. ಬಿಜೆಪಿಯ 13 ಸದಸ್ಯರಿದ್ದಾರೆ. ಹೀಗಿದ್ದರೂ ಬಿಜೆಪಿಯೊಳಗಿನ ಆಂತರಿಕ ಕಚ್ಚಾಟದಿಂದಾಗಿ ಅಧ್ಯಕ್ಷ ಸ್ಥಾನ ತಪ್ಪಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ.
ಸಚಿವ ಶರಣಬಸಪ್ಪ ದರ್ಶನಾಪುರ ಅವರ ರಾಜಕೀಯ ಪ್ಲಾನ್ ನಿಂದಾಗಿ ಕಾಂಗ್ರೆಸ್ ಅಭ್ಯರ್ಥಿ ರಹೀಮನ್ ಪಟೇಲ್ ಪುರಸಭೆ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಇಂದು ನಡೆದ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಯಡವಿದೆ. ಈ ಮೂಲಕ ಕಮಲ ಪಡೆಗೆ ಬಿಗ್ ಶಾಕ್ ನೀಡಲಾಗಿದೆ. ಆದರೆ, ಇದು ಎಷ್ಟು ದಿನ ಸೇಫ್ ಆಗಿರುತ್ತೆ ಎನ್ನುವ ಕುತೂಹಲ ಸಹ ಜನರಲ್ಲಿದೆ.