ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸುವ ಮೂಲಕ ದಾಖಲೆ ನಿರ್ಮಿಸಿದರು. ಅಣ್ವಸ್ತ್ರ ಬೆದರಿಕೆ ಹಾಕುತ್ತಿರುವ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಪರಮಾಣು ಬೆದರಿಕೆಯನ್ನು ಸಹಿಸಲಾಗುವುದಿಲ್ಲ. ಭಯೋತ್ಪಾದನೆಯನ್ನು ಬೆಂಬಲಿಗರಿಗೆ ಕಡಿವಾಣ ಹಾಕಲಿದ್ದೇವೆ ಎಂದಿದ್ದಾರೆ.
ಭಯೋತ್ಪಾದಕರು ಹಾಗೂ ಒಟ್ಟಿಗೆ ನೀರು ಹರಿಸುವುದಿಲ್ಲ. ಸಿಂಧು ನದಿ ನೀರು ಒಪ್ಪಂದವು ರೈತರಿಗೆ ಸಾಕಷ್ಟು ಹಾನಿಯಾಗಿದೆ. ಆಪರೇಷನ್ ಸಿಂಧೂರ ವೀರ ಯೋಧರಿಗೆ ನಮನ ಸಲ್ಲಿಸುವ ದಿನ ಇದಾಗಿದೆ. ಕಾಶ್ಮೀರ, ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದ ನೈಸರ್ಗಿಕ ವಿಕೋಪಗಳಲ್ಲಿ ಪ್ರಾಣ ಕಳೆದುಕೊಂಡವರನ್ನು ಸ್ಮರಿಸಲಾಗುವುದು ಎಂದಿದ್ದಾರೆ.